ರಾಮನಗರದ ಜಿಲ್ಲಾ ಕಾನೂನು ಸೇವೆಗಳ ಪ್ರದಿಕಾರದಲ್ಲಿ ಖಾಲಿ ಇರುವ ಅರೆಕಾಲಿಕ ಕಾನೂನು ಸ್ವಯಂಸೇವಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ರಾಮನಗರ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದಲ್ಲಿ ಒಟ್ಟು 175 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗಳು ಅರೆ ಕಾಲಿಕ ಸ್ವಯಂಸೇವಕರ ಯೋಜನೆಯ ನಿಯಮಗಳಿಗೆ ಒಳಪಟ್ಟಿವೆ. ಶಾಲಾ ಶಿಕ್ಷಕರು, ನಿವೃತ್ತ ಸರ್ಕಾರಿ ನೌಕರರು, ವೈದ್ಯರು, ವಿದ್ಯಾರ್ಥಿಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ಮಹಿಳಾ ಸ್ವಸಹಾಯ ಸಂಘಗಳು, ಸೇವಾ ಮನೋಭಾವ ಇರುವ ಯಾವ ವ್ಯಕ್ತಿಯಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಜಿಲ್ಲೆಯ ಹಾಗೂ ಆಯಾ ತಾಲೂಕುಗಳಿಂದ ಗೌರವಧನವನ್ನು ನೀಡಲಾಗುತ್ತದೆ. ಗೌರವಧನದ ಆಧಾರದ ಮೇಲೆ ಮೂರು ವರ್ಷದ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗಿನ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of Ramanagara District Legal Services Authority Recruitment 2024
Organization Name – District Legal Services Authority Ramanagara Post Name – Para Legal Volunteer Posts Total Vacancy – 175 Application Process: Offline Job Location – Ramanagara
Important Dates:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 05, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 20, 2024
ಒಟ್ಟು 175 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ
ಅಕ್ಷರಸ್ಥರಿದ್ದು ಕನಿಷ್ಠ ಪಕ್ಷ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ವಸ್ತು ಸ್ಥಿತಿಯ ಬಗ್ಗೆ ಹಾಗೂ ಪರಿಸ್ಥಿತಿಯ ವಿಷಯಗಳನ್ನು ಉತ್ತಮವಾಗಿ ಅರ್ಥ ಮಾಡಿಕೊಳ್ಳುವವರಾಗಿರಬೇಕು. ಯಾವುದೇ ಕ್ರಿಮಿನಲ್ ಅಪರಾಧದ ಹಿನ್ನೆಲೆವುಳ್ಳವರಾಗಿರಬಾರದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು
ಸ್ವ-ವಿವರ ಇರುವ ಅರ್ಜಿ,
ಇತ್ತೀಚಿನ ಪಾಸ್ ಪೋರ್ಟ್ ಭಾವಚಿತ್ರ
ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳು,
ಕಾರ್ಯ ನಿರ್ವಹಿಸಲು ಇಚ್ಚಿಸುವ ಬಗ್ಗೆ ಸ್ವ-ಇಚ್ಚಾ ಪತ್ರ.
How to Apply for Ramanagara DLSA Recruitment 2024
ಅರ್ಜಿ ಸಲ್ಲಿಸುವುದು ಹೇಗೆ..?: ರಾಮನಗರ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ಕಚೇರಿಯಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಂಡು ತಮ್ಮ ಸ್ವಂತ ಕೈ ಬರದಲ್ಲಿ ಭರ್ತಿ ಮಾಡಿ ಅರ್ಜಿ ಮತ್ತು ಸಂಬಂಧಪಟ್ಟ ದಾಖಲಾತಿಗಳೊಡನೆ ಸಲ್ಲಿಸಬಹುದು. ಮುಚ್ಚಿದ ಲಕೋಟೆಯಲ್ಲಿ ಅಂಚೆ ಮೂಲಕವೂ ಕೂಡ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯದ ಆವರಣ, ರಾಮನಗರ – 562159