ಪದವೀಧರರಿಗೆ ‘ಆರ್‌ಬಿಐ’ನಲ್ಲಿ ಸಹಾಯಕ ಹುದ್ದೆಗಳು.. ಅರ್ಜಿ ಸಲ್ಲಿಕೆಗೆ ಗಡುವು

ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ

Published on:

ಭಾರತೀಯ ರಿಸರ್ವ್ ಬ್ಯಾಂಕ್‌(RBI) ಪ್ಯಾನಲ್ ವರ್ಷ 2025ರಡಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ಮಾ.10ರವೆರೆಗೆ ವಿಸ್ತರಿಸಲಾಗಿದೆ.

ಒಟ್ಟು 650 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದ್ದು, ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಭಾಷಾ ಪ್ರಾವೀಣ್ಯತೆ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪದವೀಧರ ಉದ್ಯೋಗಾಕಾಂಕ್ಷಿಗಳು ಐಬಿಪಿಎಸ್‌ ಅಧಿಕೃತ ಜಾಲತಾಣದ ಲಿಂಕ್‌ https://ibpsreg.ibps.in/rbiafeb26/ನ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಫೆಬ್ರವರಿ 16, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 10, 2026(ವಿಸ್ತರಣೆ)
  • ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ – ಮಾರ್ಚ್ 10, 2026(ವಿಸ್ತರಣೆ)
  • ಆನ್‌ಲೈನ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ದಿನಾಂಕ – ಏಪ್ರಿಲ್ 11, 2026
  • ಆನ್‌ಲೈನ್ ಮುಖ್ಯ ಪರೀಕ್ಷೆಯ ತಾತ್ಕಾಲಿಕ ದಿನಾಂಕ – ಜೂನ್ 07, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಶೇ.50ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು ಜೊತೆಗೆ ಕಂಪ್ಯೂಟರ್‌ನಲ್ಲಿ ವರ್ಡ್ ಪ್ರೊಸೆಸಿಂಗ್ ಜ್ಞಾನ ಹೊಂದಿರಬೇಕು.

ಅಭ್ಯರ್ಥಿಗಳು ನೇಮಕಾತಿಗೆ ಅರ್ಜಿ ಸಲ್ಲಿಸುವವರು ರಾಜ್ಯದ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ಮತ್ತು ಅರ್ಥಮಾಡಿಕೊಳ್ಳಲು ತಿಳಿದಿರಬೇಕು.

ವಯೋಮಿತಿ:

01-02-2026ರಂತೆ;

ಕನಿಷ್ಠ ಮಿತಿ – 20 ವರ್ಷಗಳು
ಗರಿಷ್ಠ ಮಿತಿ – 28 ವರ್ಷಗಳು

ವಯೋಮಿತಿ ಸಡಿಲಿಕೆ: ಓಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10-15 ವರ್ಷ.

ಆಯ್ಕೆ ವಿಧಾನ:

  • ಪೂರ್ವಭಾವಿ ಪರೀಕ್ಷೆ
  • ಮುಖ್ಯ ಪರೀಕ್ಷೆ
  • ಭಾಷಾ ಪ್ರಾವೀಣ್ಯತೆ ಪರೀಕ್ಷೆ

ಸಂಬಳ:

ಅಭ್ಯರ್ಥಿಗಳಿಗೆ ಆರಂಭಿಕ ವೇತನ ತಿಂಗಳಿಗೆ ₹29,000 ಆಗಿರುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 450ರೂ. + 18% ಜಿಎಸ್‌ಟಿ
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50ರೂ. + 18% ಜಿಎಸ್‌ಟಿ

ಅರ್ಜಿ ಸಲ್ಲಿಸುವ ವಿಧಾನ;

• ಅಭ್ಯರ್ಥಿಗಳು IBPS ಅಧಿಕೃತ ಜಾಲತಾಣ ಲಿಂಕ್‌ https://ibpsreg.ibps.in/rbiafeb26/ಕ್ಕೆ ಭೇಟಿ ನೀಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ ಅಥವಾ ನೊಂದಣಿ ಸಂಖ್ಯೆ, ಪಾಸ್ವರ್ಡ್ ಮತ್ತು ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.

Rbi Assistant Py 2025 Recruitment 2026 Online Application Form
Rbi Assistant Py 2025 Recruitment 2026 Online Application Form

• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ, ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Last Date Extension Notice PDFDownload
Official Notification PDFDownload
Online Application Form LinkApply Now
Official Websitewww.rbi.org.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ಪದವೀಧರರಿಗೆ ‘ಆರ್‌ಬಿಐ’ನಲ್ಲಿ ಸಹಾಯಕ ಹುದ್ದೆಗಳು.. ಅರ್ಜಿ ಸಲ್ಲಿಕೆಗೆ ಗಡುವು”

Leave a Comment