ಭಾರತೀಯ ರಿಸರ್ವ್ ಬ್ಯಾಂಕಿನ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ(ಡಿಐಟಿ), ಪರಿಸರ ಇಲಾಖೆ ಹಾಗೂ ಮೇಲ್ವಿಚಾರಣಾ ಇಲಾಖೆಗಳಿಗೆ ವಿವಿಧ ತಜ್ಞರನ್ನು ಲ್ಯಾಟರಲ್ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಡಿ.17ರಿಂದ ಆರಂಭವಾಗಿದೆ.
ಡೇಟಾ ವಿಜ್ಞಾನಿ, ಡೇಟಾ ಇಂಜಿನಿಯರ್, ಐಟಿ ಭದ್ರತಾ ತಜ್ಞರು, ಪ್ರಾಜೆಕ್ಟ್ ಮ್ಯಾನೇಜರ್ ಹಾಗೂ ಅಕೌಂಟ್ಸ್ ಸ್ಪೆಷಲಿಸ್ಟ್ ಸೇರಿದಂತೆ ಇತರೆ ಒಟ್ಟು 93 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪೂರ್ಣಾವಧಿ ಗುತ್ತಿಗೆ ಆಧಾರದಡಿ ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.06 ಕೊನೆಯ ದಿನವಾಗಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು IBPS ಅಧಿಕೃತ ಜಾಲತಾಣದ ಲಿಂಕ್ https://ibpsreg.ibps.in/rbilrdec25/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 17, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 06, 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜನವರಿ 06, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ, ಎಂಸಿಎ, ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಎಂಬಿಎ, ಪಿಜಿಡಿಎಂಎ, ಸಿಎ, ಐಸಿಡಬ್ಲ್ಯೂಎ ಅಥವಾ ಸಂಬಂಧಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಬೇಕು.
• ವಿದ್ಯಾರ್ಹತೆಯ ಮೇಲೆ ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ • ದಾಖಲೆ ಪರಿಶೀಲನೆ • ಸಂದರ್ಶನ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಗ್ರೇಡ್ C ಹುದ್ದೆಗಳಿಗೆ – 3,10,000ರೂ. ಗ್ರೇಡ್ D ಹುದ್ದೆಗಳಿಗೆ – 4,30,000ರೂ. ಗ್ರೇಡ್ E ಹುದ್ದೆಗಳಿಗೆ – 6,00,000ರೂ.ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 600ರೂ. + ಜಿಎಸ್ಟಿ ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 100ರೂ. + ಜಿಎಸ್ಟಿ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಮೇಲಿನ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS ಅಧಿಕೃತ ಜಾಲತಾಣ https://ibpsreg.ibps.in/rbilrdec25/ ಕ್ಕೆ ಭೇಟಿ ನೀಡಿ.
Rbi Experts Recruitment 2025-26 Online Form
• ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ ಅಥವಾ ನೊಂದಣಿ ಸಂಖ್ಯೆ, ಪಾಸ್ವರ್ಡ್ ಮತ್ತು ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ, ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.