ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಪ್ರಾದೇಶಿಕ ಕಚೇರಿಗಳಲ್ಲಿ ಖಾಲಿರುವ ಆಫೀಸ್ ಅಟೆಂಡೆಂಟ್(ಕಚೇರಿ ಪರಿಚಾರಕ) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಒಟ್ಟು 572 ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಫೆ.04 ರೊಳಗೆ IBPS ಅಧಿಕೃತ ಜಾಲತಾಣದ ಲಿಂಕ್ https://ibpsreg.ibps.in/rbipodec25/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜನವರಿ 15, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 04, 2026 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 04, 2026 ಆನ್ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ – ಫೆಬ್ರವರಿ 28, ಮತ್ತು ಮಾರ್ಚ್ 01, 2026 ವಲಯವಾರು ಖಾಲಿ ಇರುವ ಹುದ್ದೆಗಳ ವಿವರ: ಅಹಮದಾಬಾದ್ – 29 ಹುದ್ದೆಗಳು ಬೆಂಗಳೂರು -16 ಹುದ್ದೆಗಳು ಭೋಪಾಲ್ – 04 ಹುದ್ದೆಗಳು ಭುವನೇಶ್ವರ – 36 ಹುದ್ದೆಗಳು ಚಂಡೀಗಡ – 02 ಹುದ್ದೆಗಳು ಚೆನ್ನೈ – 09 ಹುದ್ದೆಗಳು ಗುವಹಟಿ – 52 ಹುದ್ದೆಗಳು ಹೈದರಾಬಾದ್ – 36 ಹುದ್ದೆಗಳು ಜೈಪುರ್ – 42 ಹುದ್ದೆಗಳು ಕಾನ್ಪುರ್ & ಲಕ್ನೋ – 125 ಹುದ್ದೆಗಳು ಕೊಲ್ಕತ್ತಾ – 90 ಹುದ್ದೆಗಳು ಮುಂಬೈ – 33 ಹುದ್ದೆಗಳು ನ್ಯೂ ಡೆಲ್ಲಿ – 61 ಹುದ್ದೆಗಳು ಪಟ್ನಾ – 37 ಹುದ್ದೆಗಳು
ಒಟ್ಟು – 572 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಆಯಾ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ/ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
• ಅಭ್ಯರ್ಥಿಯು 01-01-2026 ರಂತೆ ಪದವಿಪೂರ್ವ ವಿದ್ಯಾರ್ಥಿಯಾಗಿರಬೇಕು. ಪದವೀಧರರು ಮತ್ತು ಹೆಚ್ಚಿನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವಯೋಮಿತಿ: 01-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.
ಆಯ್ಕೆ ವಿಧಾನ: ಆನ್ಲೈನ್ ಪರೀಕ್ಷೆ ಭಾಷಾ ಪ್ರಾವೀಣ್ಯತೆ ಪರೀಕ್ಷೆ(LPT) ಸಂಬಳ: ಆಯ್ಕೆಯಾದ ಅಭ್ಯರ್ಥಿಗಳಿಗೆ 46,029ರೂ. ವರೆಗೆ ಮಾಹೆಯಾನ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 450ರೂ. + 18%ಜಿಎಸ್ಟಿ ಪ.ಜಾತಿ, ಪ.ಪಂಗಡ, ಮಾಜಿ ಸೈನಿಕ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 50ರೂ. + 18%ಜಿಎಸ್ಟಿ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ • ಮೊದಲಿಗೆ ಅಭ್ಯರ್ಥಿಗಳು IBPS ಅಧಿಕೃತ ಜಾಲತಾಣದ ಲಿಂಕ್ https://ibpsreg.ibps.in/rbipodec25ಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ ಅಥವಾ ನೊಂದಣಿ ಸಂಖ್ಯೆ, ಪಾಸ್ವರ್ಡ್ ಮತ್ತು ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ, ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links: