ಕಪುರ್ತಲಾ ರೈಲು ಕೋಚ್ ಫ್ಯಾಕ್ಟರಿ (RCF)ಯ ತಾಂತ್ರಿಕ ತರಬೇತಿ ಕೇಂದ್ರವು ಅಪ್ರೆಂಟಿಸ್ಶಿಪ್ ಕಾಯ್ದೆಯಡಿ 550 ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಫಿಟ್ಟರ್, ವೆಲ್ಡರ್, ಮೆಷಿನಿಸ್ಟ್, ಕಾರ್ಪೆಂಟರ್, ಪೇಂಟರ್, ಎಲೆಕ್ಟ್ರಿಷಿಯನ್ ಹಾಗೂ ಮೆಕ್ಯಾನಿಕ್ ಟ್ರೇಡ್ನ ಅಭ್ಯರ್ಥಿಗಳಿಗೆ ತರಬೇತಿ ಒದಗಿಸಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RCF ಅಧಿಕೃತ ವೆಬ್ಸೈಟ್ ಲಿಂಕ್ https://pardarsy.railnet.gov.in/apprentice-2025/ಗೆ ಭೇಟಿ ನೀಡಿ. 2026ರ ಜನವರಿ 7ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 09, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 07, 2026
ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜನವರಿ 09, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ಅಥವಾ ಅದಕ್ಕೆ ಸಮಾನವಾದ (10+2 ವರ್ಷದೊಳಗಿನ ಪರೀಕ್ಷಾ ವ್ಯವಸ್ಥೆ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸಂಬಂಧಸಿದ ಟ್ರೇಡ್ನಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.
• ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ • ದಾಖಲೆ ಪರಿಶೀಲನೆ • ವೈದ್ಯಕೀಯ ಪರೀಕ್ಷೆ
ಸ್ಟೈಫಂಡ್:
ಸದರಿ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೈಲ್ವೆ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಚಾಲ್ತಿಯಲ್ಲಿರುವ ನಿಯಮಗಳು ಮತ್ತು ನಿರ್ದೇಶನಗಳ ಪ್ರಕಾರ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 100ರೂ. ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
• RCF ಅಧಿಕೃತ ವೆಬ್ಸೈಟ್ https://rcf.indianrailways.gov.in/view_section.jsp?lang=0&id=0,296,640 ಗೆ ಭೇಟಿ ನೀಡಿ.
• ಮುಖಪುಟದಲ್ಲಿ ನೀಡಲಾದ *2025-26ನೇ ಸಾಲಿನ ಆಕ್ಟ್ ಅಪ್ರೆಂಟಿಸ್ ತರಬೇತಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ(Apply for online application of Act Apprentice Training 2025-26)* ಲಿಂಕ್ ಮೇಲೆ ಟ್ಯಾಪ್ ಮಾಡಿ.
• ನಂತರ *ರೈಲು ಕೋಚ್ ಕಾರ್ಖಾನೆ* ಶೀರ್ಷಿಕೆಯ ಮೇಲೆ ಕ್ಲಿಕ್ ಮಾಡಿ.
• ಬಳಿಕ ಬಳಕೆದಾರರ ಹೆಸರು ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ಲಾಗಿನ್ ಆದ ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.