RCF ಲಿಮಿಟೆಡ್‌ನಲ್ಲಿ ಆಪರೇಟರ್ ಟ್ರೈನಿ ಹುದ್ದೆಗಳ ಭರ್ತಿ; ಈಗಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಏ.27ರ ಗಡುವು

Published on:

ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್(RCFL) ತನ್ನ ಕೆಮಿಕಲ್‌ ವಿಭಾಗದಲ್ಲಿ ಖಾಲಿ ಇರುವ ಆಪರೇಟರ್ ಟ್ರೈನಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.

188 ಬಿಎಸ್ಸಿ ಪದವೀಧರರನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏ.27ರವರೆಗೆ ಕಾಲಾವಕಾಶ ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಅಭ್ಯರ್ಥಿಗಳು ಐಬಿಪಿಎಸ್‌ ಅಧಿಕೃತ ಜಾಲತಾಣ https://ibpsreg.ibps.in/rcflfeb26/ಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ನೇಮಕಾತಿಗೆ ಅರ್ಜಿ ಸಲ್ಲಿಸಲು‌ ಪ್ರಾರಂಭದ ದಿನಾಂಕ – ಏಪ್ರಿಲ್ 11, 2026
  • ನೇಮಕಾತಿಗೆ ಅರ್ಜಿ ಸಲ್ಲಿಸಲು‌ ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 27, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 55% ಅಂಕಗಳೊಂದಿಗೆ ಭೌತಶಾಸ್ತ್ರವನ್ನು ಒಂದು ವಿಷಯವಾಗಿಟ್ಟುಕೊಂಡು ಬಿ.ಎಸ್ಸಿ(ರಸಾಯನಶಾಸ್ತ್ರ) ಪದವಿ ಮತ್ತು ಎಒ(ಸಿಪಿ) ಟ್ರೇಡ್‌ನಲ್ಲಿ ಎನ್‌ಸಿವಿಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅಥವಾ

ಕೆಮಿಕಲ್ ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ 03 ವರ್ಷಗಳ ಡಿಪ್ಲೊಮಾ ಮತ್ತು 01 ವರ್ಷದ ತರಬೇತಿ (BOAT) ಅನ್ನು ಪೂರ್ಣಗೊಳಿಸಿರಬೇಕು.

ಅಥವಾ

ಕೆಮಿಕಲ್ ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ 04 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:

01-02-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು

ವಯೋಮಿತಿ ಸಡಿಲಿಕೆ; ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, 1984ರ ಗಲಭೆಯ ಬಲಿಪಶುಗಳ ಮಾಜಿ ಸೈನಿಕರು/ಮಕ್ಕಳು/ಕುಟುಂಬ ಸದಸ್ಯರಿಗೆ 05 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಆನ್ಲೈನ್ ಪರೀಕ್ಷೆ
  • ಮೆರಿಟ್ ಪಟ್ಟಿ
  • ಕೌಶಲ್ಯ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಅಭ್ಯರ್ಥಿಗಳಿಗೆ ಮಾಸಿಕ ₹22,000-₹60,000ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ₹700
ಪ.ಜಾತಿ, ಪ.ಪಂಗಡ, ಮಹಿಳಾ ವರ್ಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ‌ ಸಲ್ಲಿಸುವ ವಿಧಾನ ಹೇಗೆ?

• ಅಭ್ಯರ್ಥಿಗಳು IBPS ಅಧಿಕೃತ ಜಾಲತಾಣ https://ibpsreg.ibps.in/rcflfeb26/ ಕ್ಕೆ ಭೇಟಿ ನೀಡಿ.

• ಹೊಸ ಅರ್ಜಿದಾರರಾಗಿದ್ದಲ್ಲಿ ನೋಂದಾಯಿಸಿ/ ಈಗಾಗಲೇ ನೋಂದಾಯಿಸಿದ್ದಲ್ಲಿ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.rcfltd.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment