ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ (RCFL) ಖಾಲಿ ಇರುವ ನರ್ಸ್ ಗ್ರೇಡ್ II ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (RCFL) 06 ಖಾಲಿ ಇರುವ ನರ್ಸ್ ಗ್ರೇಡ್ II ಹುದ್ದೆಗೆ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು RCFL Nurse Vacancy 2024 ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ rcfltd.com ಸೆಪ್ಟೆಂಬರ್ 05 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ RCFL Nurse Grade II (A6 Grade) Recruitment 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಗಸ್ಟ್ 22, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 05, 2024
ಶೈಕ್ಷಣಿಕ ಅರ್ಹತೆಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು UGC ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ B.Sc ನರ್ಸಿಂಗ್/GNM ಕೋರ್ಸ್ ಪಡೆದುಕೊಂಡಿರಬೇಕು.