RCUB UG Guest Faculty Recruitment 2025: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿಗೆ ಸ್ನಾತಕ (UG) ಕೋರ್ಸ್ ವಿಷಯಗಳ ಬೋಧನೆಗಾಗಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕ (UG)ವಿಷಯಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಮತ್ತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000ರ ನಿಯಮಾನುಸಾರ ಪೂರ್ಣಕಾಲಿಕ/ ಅರೆಕಾಲಿಕ ತಾತ್ಕಾಲಿಕ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ www.rcub.ac.in ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಕ್ಕೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 10-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 24-06-2025
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ P.G./Ph.D./NET/SET ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನಿಯಮಗಳ ಅನುಸಾರ
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ www.rcub.ac.in ಗೆ ಭೇಟಿ ನೀಡಿ.
ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಲಭ್ಯವಿರುವ Google Sheet ಲಿಂಕನ್ನು ಬಳಸಿ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಡೌನ್ಲೋಡ್ ಮಾಡಿಕೊಳ್ಳಿ.
ಸಂದರ್ಶನದ ದಿನಾಂಕ ಹಾಗೂ ಸಮಯ
ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಂಡು. ಭರ್ತಿ ಮಾಡಿದ ದ್ವಿ-ಪ್ರತಿ ಅರ್ಜಿಗಳೊಂದಿಗೆ ವಿವಿಧ ವಿಷಯಗಳಿಗೆ ಅನುಗುಣವಾಗಿ ಸೂಚಿಸಿದ ದಿನಗಳಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದ ದಿನಾಂಕ ಮತ್ತು ಸಮಯವನ್ನು ನಂತರ ವಿಶ್ವವಿದ್ಯಾಲಯದ ಜಾಲತಾಣ www.rcub.ac.in ದಲ್ಲಿ ಪ್ರಕಟಿಸಲಾಗುವುದು.