ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ ಸಂಬಂಧ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ಓಂಬುಡ್ಸ್ ಪರ್ಸನ್ ಹುದ್ದೆಗಳ ನೇಮಕಾತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣಕನ್ನಡ ಮತ್ತು ಕಲಬುರಗಿ ಜಿಲ್ಲೆಗಳಿಗೆ 2 ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಕ್ಟೋಬರ್ 3 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ಮುಖ್ಯ ಕಾರ್ಯಾಚರಣೆ ಅಧಿಕಾರಿ (ಪ್ರ) ಅವರು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಸೆಪ್ಟೆಂಬರ್ 02, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 03, 2025
ಶೈಕ್ಷಣಿಕ ಅರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ಅಭ್ಯರ್ಥಿಗಳು ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ ಹಾಗೂ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕು.
• ಸಾರ್ವಜನಿಕರೊಂದಿಗೆ/ಸಮುದಾಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವೂ ಒಂದು ಕಡ್ಡಾಯ ಅರ್ಹತೆ ಆಗಿರುತ್ತದೆ.
• ಅರ್ಜಿ ಸಲ್ಲಿಸುವವರು ಯಾವುದೇ ರಾಷ್ಟ್ರೀಯ/ರಾಜಕೀಯ ಪಕ್ಷದ ಮತ್ತು ನಿಷೇಧಿತ ಸಂಘ ಸಂಸ್ಥೆಯ ಸದಸ್ಯರಾಗಿರಬಾರದು ಹಾಗೂ ಈ ಕುರಿತು ನೋಟರಿ ಅನ್ನು ಸಹ ಸಲ್ಲಿಸಬೇಕು.
• ತಪಾಸಣೆ, ಕ್ಷೇತ್ರ ಭೇಟಿ, ಹಾಗೂ ವೀಕ್ಷಣೆ ಕೆಲಸಗಳಿಗೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಮರ್ಥರಾಗಿರಬೇಕು ಹಾಗೂ ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಬೇಕು.
ಸೇವಾ ಅವಧಿ:
ನೇಮಕಾತಿಯು ಮೊದಲಿಗೆ 2 ವರ್ಷಗಳ ಅವಧಿಯದಾಗಿರುತ್ತದೆ. ಆದರೆ ಕಾರ್ಯನಿರ್ವಹಣೆಯು ಅತೃಪ್ತಿಕರವಾಗಿ ಕಂಡು ಬಂದಲ್ಲಿ ಅವಧಿಗೆ ಮುನ್ನವೇ ಹುದ್ದೆಯಿಂದ ತೆಗೆದು ಹಾಕಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಯೋಮಿತಿ:
3.10.2025 ರಂತೆ;
ಗರಿಷ್ಠ ವಯಸ್ಸಿನ ಮಿತಿ – 66 ವರ್ಷಗಳು
ಆಯ್ಕೆ ವಿಧಾನ:
ಉಲ್ಲೇಖಿಸಲಾಗಿರುವುದಿಲ್ಲ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಸ್ತುತ ಮಾಸಿಕ 10,000ರೂ. ಗೌರವಧನ ಹಾಗೂ ಪ್ರತಿ ಸಿಟ್ಟಿಂಗ್ಗೆ 2250 ರೂ.ಗಳಿಂದ ಗರಿಷ್ಠ45,000ರೂ.ಗಳವರೆಗೆ ಸಿಟ್ಟಿಂಗ್ ಫೀಜು ನೀಡಲಾಗುವುದು.
ಕೇಂದ್ರ/ರಾಜ್ಯ ಸರ್ಕಾರವು ಹೊರಡಿಸುವ ಆದೇಶಗಳ ಅನುಸಾರ ಸಂಭಾವನೆ (ಸಿಟ್ಟಿಂಗ್ ಫೀಜು) ನೀಡಲಾಗುವುದು.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ಜಾಲತಾಣದ https://www.rdpr.karnataka.gov.in/ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಂಡು.
ಅಭ್ಯರ್ಥಿಗಳ ವ್ಯಕ್ತಿತ್ವ ಪರಿಚಯ, ಕನಿಷ್ಠ 10 ವರ್ಷಗಳ ಕಾರ್ಯನಿರ್ವಹಣೆ ಸೇವಾನುಭವದ ಪ್ರಮಾಣಪತ್ರ ವಿವರ, ಶೈಕ್ಷಣಿಕ ದಾಖಲಾತಿಗಳು ಹಾಗೂ ಇತರೆ ಪೂರಕ ದಾಖಲೆಗಳನ್ನು ಲಗತ್ತಿಸಿ ಖುದ್ದಾಗಿ ಅಥವಾ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಅಕ್ಟೋಬರ್ 03 ರೊಳಗೆ ಕಳುಹಿಸಬೇಕು.
ವಿಳಾಸ: ಆಯುಕ್ತರು ಗ್ರಾಮೀಣಾಭಿವೃದ್ಧಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ರಾಟ್ ನಂ.1243, ಕೆ.ಎಸ್.ಐ.ಐ.ಡಿ.ಸಿ.ಕಟ್ಟಡ, ಐ.ಟಿ. ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560010
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ: 080-22342794 ಅನ್ನು ಸಂಪರ್ಕಿಸಬಹುದು.