ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಪೋರ್ಟ್ ಎಕ್ಸಿಕ್ಯೂಟಿವ್ 01 ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಚೇರಿಯಲ್ಲಿ ಖಾಲಿ ಇರುವ ಸಪೋರ್ಟ್ ಎಕ್ಸಿಕ್ಯೂಟಿವ್ -1 ಹುದ್ದೆಗೆ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Organization Name – Rural Development and Panchayat Raj Department Karnataka Post Name – Support Executive Total Vacancy – 01 Application Process – Offline Job Location – Karnataka
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಅಧಿಸೂಚನೆಯ ದಿನಾಂಕ – 14-05-2025 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 26-05-2025
ಶೈಕ್ಷಣಿಕ ಅರ್ಹತೆ:
ಆಸಕ್ತ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶೈಕ್ಷಣಿಕ ಸಂಸ್ಥೆ/ಮಂಡಳಿಯಿಂದ BE(CS, E&C, TC, IS)/B-Tech(CS, E&C, TC, IS)/BSc (CS, E&C)/BBA ಪೂರ್ಣಗೊಳಿಸಿರಬೇಕು.
ವೃತ್ತಿ ಅನುಭವ:
ತಾಂತ್ರಿಕ ಬೆಂಬಲದಲ್ಲಿ 01 ವರ್ಷಗಳ ಅನುಭವ
ತಾಂತ್ರಿಕ ಯೋಜನೆಗಳಲ್ಲಿ ಅನುಭವ.
ಸರ್ಕಾರಿ ಸಂಸ್ಥೆಯಲ್ಲಿ ಫೈಲ್ ಪ್ರಕ್ರಿಯೆಯ ಡೊಮೇನ್ ಜ್ಞಾನ.
ಸಮಸ್ಯೆಗಳನ್ನು ಗುರುತಿಸುವಲ್ಲಿ ಮತ್ತು ಪತ್ತೆಹಚ್ಚುವಲ್ಲಿ ಅನುಭವ.
ಸಿಸ್ಟಮ್ ಇಂಟಿಗ್ರೇಟಿಂಗ್ ಕಂಪನಿಯೊಂದಿಗೆ ತಾಂತ್ರಿಕ ಬೆಂಬಲ ಅನುಭವಕ್ಕೆ ಆದ್ಯತೆ ನೀಡಲಾಗುತ್ತದೆ.
ವಿಂಡೋಸ್ ಮತ್ತು ಲಿನಕ್ಸ್ ಪರಿಸರದಲ್ಲಿ ಬೆಂಬಲ ಅನುಭವ ಇರಬೇಕು.
ವರದಿ ಮತ್ತು ವಿಶ್ಲೇಷಣೆಗೆ ಒಡ್ಡಿಕೊಳ್ಳುವುದು ಅವಶ್ಯಕ.
ಓದಲು ಮತ್ತು ಬರೆಯಲು ಕನ್ನಡ ಮತ್ತು ಇಂಗ್ಲಿಷ್ ಜ್ಞಾನ ಕಡ್ಡಾಯ.
ವಯೋಮಿತಿ:
ದಿನಾಂಕ – 14-05-2025 ರಂತೆ ಗರಿಷ್ಠ 45 ವರ್ಷಗಳು.
ಆಯ್ಕೆ ವಿಧಾನ:
ಅಭ್ಯರ್ಥಿಗಳ ಕಿರುಪಟ್ಟಿ
ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್ಸೈಟ್ https://rdpr.karnataka.gov.in/page/Recruitment/Notifications/kn ಗೆ ಭೇಟಿ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಛೇರಿಗೆSupport Executive ತಾತ್ಕಾಲಿಕ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ – ಅರ್ಜಿ ನಮೂನೆ ಡೌನ್ಲೋಡ್ ಮಾಡಿ.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, (Resume) ಪ್ರತಿಯನ್ನು ಲಗತ್ತಿಸಿ.
ಅರ್ಜಿಯ ಹಾರ್ಡ್ ಪ್ರತಿಯನ್ನುನಿರ್ದೇಶಕರು, ಇ-ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 2 ನೇ ಮಹಡಿ, 3ನೇ ಹಂತ, ಬಹುಮಹಡಿ ಕಟ್ಟಡ, ಬೆಂಗಳೂರು-560001 ಈ ವಿಳಾಸಕ್ಕೆ ಮೇ 26ರ ಸಂಜೆ 5:30 ಗಂಟೆಯೊಳಗೆ ಸಲ್ಲಿಸಬೇಕು.
ವಿಶೇಷ ಸೂಚನೆ:
ಸ್ನಾತಕ/ಸ್ನಾತಕೋತ್ತರ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ. ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಕರಾರು ಒಪ್ಪಂದ ಮಾಡಿಕೊಂಡ ಅಭ್ಯರ್ಥಿಗೆ ಇಲಾಖೆಯಲ್ಲಿನ ಯಾವುದೇ ಹುದ್ದೆಗಳಲಿ ವಿಲೀನಗೊಳ್ಳಲು/ಮುಂದುವರೆಸಲು ಯಾವುದೇ ಹಕ್ಕು ಇರುವುದಿಲ್ಲ.
ನೇಮಕಾತಿಯನ್ನು ಪೂರ್ಣವಾಗಿ ಮತ್ತು ಭಾಗಶ: ರದ್ದು ಮಾಡುವ/ಮುಂದೂಡುವ/ಬದಲಾವಣೆ ಮಾಡುವ ಹಕ್ಕನ್ನು ಇಲಾಖೆಯು ಹೊಂದಿರುತ್ತದೆ.