ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Highlights of Employment News
Organization Name – Rural Drinking Water and Sanitation Department
Post Name – District MI Consultant
Application Process – Offline
Job Location – Karnataka
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – 19-05-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 02-06-2025
ಶೈಕ್ಷಣಿಕ ಅರ್ಹತೆ:
ಜಿಲ್ಲಾ MIS ಸಮಾಲೋಚಕರು ಹುದ್ದೆಗೆ – ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಖ್ಯಾಶಾಸ್ತ್ರ /ಎಂ.ಸಿ.ಎ/ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್/ಬಿಇ ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ:
ನೇಮಕಾತಿ ನಿಯಮಾವಳಿ ಪ್ರಕಾರ ಹೊಂದಿರಬೇಕು.
ವೃತ್ತಿ ಅನುಭವ:
ದತ್ತಾಂಶ ನಿರ್ವಹಣಾ ದತ್ತಾಂಶ ಸಂಶೋಧನೆಯಲ್ಲಿ 3-5 ವರ್ಷಗಳ ಸಂಬಂಧಿತ ಅನುಭವ, ಮೇಲಾಗಿ ಅಭಿವೃದ್ಧಿ ಕ್ಷೇತ್ರಗಳಲ್ಲಿ ವೃತ್ತಿ ಅನುಭವ ಹೊಂದಿರಬೇಕು.
ಮಾಸಿಕ ಸಮಾಲೋಚನಾ ಶುಲ್ಕ:
25,000 – 30,000 ರೂ. ಸಮಾಲೋಚನ ಶುಲ್ಕವನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ
ಆಯ್ಕೆ ವಿಧಾನ ಮತ್ತು ಷರತ್ತುಗಳ ಬಗ್ಗೆ ಮಾಹಿತಿಗಾಗಿ ಕಾರ್ಯನಿರ್ವಾಹಕ ಇಂಜಿನೀಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮೈಸೂರು ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ಮತ್ತಷ್ಟು ಇತರೆ ಮಾಹಿತಿಗಾಗಿ KarnatakaHelp.inಗೆ ಭೇಟಿ ನೀಡಿ.