ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೆಂಗಳೂರಿನ ತನ್ನ ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ರಾಜ್ಯ IAS ಕೋ ಆರ್ಡಿನೇಟರ್ ಮತ್ತು ರಾಜ್ಯ ನೀರು ಗುಣಮಟ್ಟದ ಕೋ ಆರ್ಡಿನೇಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯ ಜೊತೆಗೆ ನಿಗದಿತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024ಕ್ಕೆ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ ಸೈಟ್ https://swachhamevajavate.org ನಲ್ಲಿ ರಜೆಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ RDWSD Karnataka Recruitment 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of RDWSD KSRWSP Karnataka Notification 2024
Organization Name – Rural Drinking Water and Sanitation Department Post Name – State ISA Co-Ordinator and State Water Quality Co-Ordinator Application Process: Online Job Location – Bengaluru
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 10, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 23, 2024
ವಿದ್ಯಾರ್ಹತೆ:
ರಾಜ್ಯ IAS ಕೋ ಆರ್ಡಿನೇಟರ್(State ISA Co-Ordinator) ಹುದ್ದೆಗೆ – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ/ MSW/ಗ್ರಾಮೀಣಾಭಿವೃದ್ಧಿ/ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರಬೇಕು
ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷಗಳ ಅನುಭವ ಮತ್ತು ನೀರು, ನೈರ್ಮಲ್ಯ ಮತ್ತು ಗ್ರಾಮೀಣ ಅಭಿವೃದ್ಧಿಯಲ್ಲಿ ಅಭಿವೃದ್ಧಿ ವಲಯದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.
ರಾಜ್ಯ ನೀರು ಗುಣಮಟ್ಟದ ಕೋ ಆರ್ಡಿನೇಟರ್(State Water Quality Co-Ordinator) ಹುದ್ದೆಗೆ – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ರಸಾಯನಶಾಸ್ತ್ರ / ಜೀವರಸಾಯನಶಾಸ್ತ್ರ / ಜೈವಿಕ ತಂತ್ರಜ್ಞಾನ / ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಮಾತ್ರ ಅರ್ಜಿ ಸಲ್ಲಿಸಬಹುದು.
NABL ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಕನಿಷ್ಠ 3 ವರ್ಷಗಳ ತಾಂತ್ರಿಕ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಣೆ ಮತ್ತು ನೀರಿನ ಗುಣಮಟ್ಟ ವಿಶ್ಲೇಷಣೆಯಲ್ಲಿ ಕನಿಷ್ಠ 10 ವರ್ಷಗಳ ಅನುಭವ ಇರಬೇಕು.
ವಯಸ್ಸಿನ ಮಿತಿ:
ಈ ಅಧಿಸೂಚನೆಯ ಪ್ರಾಕರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 50 (ಐವತ್ತು) ವರ್ಷಗಳಿಗಿಂತ ಹೆಚ್ಚಿರಬಾರದು.
ವೇತನ ಶ್ರೇಣಿ:
ರಾಜ್ಯ IAS ಕೋ ಆರ್ಡಿನೇಟರ್ ಹುದ್ದೆಗೆ – ಮಾಸಿಕವಾಗಿ ₹1,00,000 ರಿಂದ 1,25,000/- ನೀಡಲಾಗುತ್ತದೆ.
ರಾಜ್ಯ ನೀರು ಗುಣಮಟ್ಟದ ಕೋ ಆರ್ಡಿನೇಟರ್ ಹುದ್ದೆಗೆ – ಮಾಸಿಕವಾಗಿ ₹75,000 ರಿಂದ ₹1,00,000 ನೀಡಲಾಗುತ್ತದೆ
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಗಳಿಸದ ಅಂಕಗಳು ಮತ್ತು ಕಾರ್ಯನುಭವದ ಮೇಲೆ ಶಾರ್ಟ್‌ಲಿಸ್ಟ್ ಮಾಡಿ, ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
How to Apply for RDWSD Karnataka Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ…?
ಮೊದಲಿಗೆ RDWSD ಅಧಿಕೃತ ವೆಬ್ ಸೈಟ್ https://swachhamevajavate.org ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ Latest Jobs ಮೇಲೆ ಕ್ಲಿಕ್ ಮಾಡಿ
ನಂತರ State ISA Co-Ordinator ಮತ್ತು State Water Quality Co-Ordinator ಹುದ್ದೆಗಳ ಲಿಂಕ್ ಹುಡುಕಿ
ನೇಮಕಾತಿಯ ಮುಂದೆ ನೀಡಲಾಗಿರುವ Apply Now ಲಿಂಕ್ ಕ್ಲಿಕ್ ಮಾಡಿ.
ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ದ್ವೀಪಗಳು ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ:
ದೂರವಾಣಿ ಸಂಖ್ಯೆ – 080-22533700ಕ್ಕೆ ಸಂಪರ್ಕ ಮಾಡಬಹುದು.