ಚಾಮರಾಜನಗರ ಜಿಲ್ಲೆಯ 20 ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ(Guest Teacher) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಚಾಮರಾಜನಗರ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳ ಬೋಧನೆ ಮಾಡಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10-05-2025
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು
- ಇಂಗ್ಲಿಷ್ ಬೋಧನೆಗೆ ಬಿ.ಎ, ಬಿ.ಇ.ಡಿ ಇಂಗ್ಲಿಷ್ ಐಚ್ಛಿಕ ವಿಷಯದಲ್ಲಿ ಪದವಿ ಪಡೆದಿರಬೇಕು.
- ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧನೆ ಮಾಡುವವರು ಸಂಬಂಧಿಸಿದ ವಿಷಯಗಳಲ್ಲಿ ಬಿ.ಎಸ್.ಸಿ. ಬಿ.ಇ.ಡಿ (ಪಿ.ಎಂ ಅಥವಾ ಸಿ.ಬಿ.) ಪದವಿ ಪಡೆದಿರಬೇಕು.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಆಸಕ್ತರು ವಿದ್ಯಾರ್ಹತೆ ಮತ್ತು ಸ್ವ-ವಿವರದ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಚಾಮರಾಜನಗರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಮೇ 10 ರೊಳಗೆ ಸಲ್ಲಿಸಬಹುದು.
More Updates – Karnataka Help.in