RIMC Class 8th Admission 2025: ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
RIMC Class 8th Admission 2025-26
RIMC Class 8th Admission 2025-26

2026ನೇ ಶೈಕ್ಷಣಿಕ ಸಾಲಿಗೆ ಉತ್ತರಖಾಂಡ್​ನ ಡೆಹರಾಡೂನ್ ರಾಷ್ಟೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗೆ ಪ್ರವೇಶಾತಿಗಾಗಿ ನಡೆಸುವ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಮತ್ತು ಅರ್ಹ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಆಗಸ್ಟ್ 14, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 15, 2025
  • ಅರ್ಹತಾ ಪ್ರವೇಶ ಪರೀಕ್ಷೆ ದಿನಾಂಕ – ಡಿಸೆಂಬರ್ 07, 2025

ವಿದ್ಯಾರ್ಹತೆ:

ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment