ರೈಲ್ವೇ ಸಚಿವಾಲಯದ ಸಾರ್ವಜನಿಕ ಉದ್ಯಮವಾಗಿರುವ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಲಿಮಿಟೆಡ್ 2025-26ನೇ ಸಾಲಿಗೆ ಅಪ್ರೆಂಟಿಸ್ಶಿಪ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪದವೀಧರ, ಡಿಪ್ಲೊಮಾ ಹಾಗೂ ಐಟಿಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಂದು ವರ್ಷದ ಅವಧಿಗೆ ತರಬೇತಿ ನೀಡಲಾಗುವುದು. ತರಬೇತಿ ಸಮಯದಲ್ಲಿ ಮಾಹೆಯಾನ ತರಬೇತಿ ವೇತನ ನೀಡಲಾಗುತ್ತದೆ. ಸದರಿ ಅಪ್ರೆಂಟಿಸ್ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RITES ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://apprentice.rites.com:444/ApprenticeFormಗೆ ಭೇಟಿ ನೀಡಿ. ಡಿ.05ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
✓ ಪದವೀಧರ ಅಪ್ರೆಂಟಿಸ್ (110) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ (ಬಿಇ/ಬಿ.ಟೆಕ್/ಬಿ.ಆರ್ಕ್) ವಿಭಾಗದಲ್ಲಿ ನಾಲ್ಕು ವರ್ಷಗಳ ಪೂರ್ಣಾವಧಿ ಇಂಜಿನಿಯರಿಂಗ್ ಪದವಿ ಅಥವಾ ಬಿಎ/ಬಿಬಿಎ/ಬಿ.ಕಾಂ/ಬಿ.ಎಸ್ಸಿ/ಬಿಸಿಎ) ಪದವಿ ಪೂರ್ಣಗೊಳಿಸಿರಬೇಕು.
✓ ಡಿಪ್ಲೊಮಾ ಅಪ್ರೆಂಟಿಸ್ (49) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಮೂರು ವರ್ಷಗಳ ಪೂರ್ಣ ಸಮಯದ ಇಂಜಿನಿಯರಿಂಗ್ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
✓ ಟ್ರೇಡ್ ಅಪ್ರೆಂಟಿಸ್ (57) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ ಐಟಿಐ ಉತ್ತೀರ್ಣರಾಗಿರಬೇಕು.
ವಯೋಮಿತಿ:
17-11-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸ್ಟೈಫಂಡ್:
ಪದವೀಧರ ಅಪ್ರೆಂಟಿಸ್ ಗಳಿಗೆ 14,000ರೂ., ಡಿಪ್ಲೋಮಾ ಅಪ್ರೆಂಟಿಸ್ ಗಳಿಗೆ 12,000ರೂ. ಹಾಗೂ ಐಟಿಐ ಟ್ರೇಡ್ ಅಪ್ರೆಂಟಿಸ್ ಗಳಿಗೆ 10,000ರೂ. ವರೆಗೆ ಪ್ರತಿ ತಿಂಗಳು ತರಬೇತಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಮೊದಲು ಪದವೀಧರ ಅಭ್ಯರ್ಥಿಗಳು https://nats.education.gov.in/student_type.phpನಲ್ಲಿ ನೋಂದಣಿಯಾಗಿರಬೇಕು ಹಾಗೂ ಐಟಿಐ ಅಭ್ಯರ್ಥಿಗಳು www.apprenticeshipindia.gov.inನಲ್ಲಿ ನೋಂದಣಿ ಆಗಿರಬೇಕು.
• RITES ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://apprentice.rites.com:444/ApprenticeForm ಗೆ ಭೇಟಿ ನೀಡಿ.
• ಅಭ್ಯರ್ಥಿಗಳು ಅಪ್ರೆಂಟಿಸ್ ವಿವರಗಳ ಪ್ರವೇಶ ನಮೂನೆಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿಯನ್ನು ನಮೂದಿಸಿ, ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.