ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿರುವ, ರೈಲ್ವೆ ಸಚಿವಾಲಯದ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ(RITES) ಲಿಮಿಟೆಡ್ 15 ಸಹಾಯಕ (ಮಾನವ ಸಂಪನ್ಮೂಲ-HR) ಮತ್ತು 11 ಸಹಾಯಕ ವ್ಯವಸ್ಥಾಪಕ(ಹಣಕಾಸು) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಒಟ್ಟು 26 ಸ್ಥಾನಗಳಿಗೆ ನಿಯಮಿತ ಆಧಾರದಡಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆರ್ಐಟಿಇಎಸ್ ಲಿಮಿಟೆಡ್ ಅಧಿಕೃತ ಜಾಲತಾಣ https://recruit.rites.com/frmRegistration.aspxಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಏ.27ರವರೆಗೆ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮಾರ್ಚ್ 18, 2026 ಸಹಾಯಕ (HR) ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮಾರ್ಚ್ 19, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 27, 2026 ಶೈಕ್ಷಣಿಕ ಅರ್ಹತೆ: ✓ ಸಹಾಯಕ (HR) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
✓ ಸಹಾಯಕ ವ್ಯವಸ್ಥಾಪಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್/ಕಾಸ್ಟ್ ಅಕೌಂಟೆಂಟ್ ಕೋರ್ಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ: 27-04-2026ರಂತೆ;
ಸಹಾಯಕ (HR) ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 32 ವರ್ಷಗಳು
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ದಾಖಲೆ ಪರಿಶೀಲನೆ ಸಂದರ್ಶನ ಸಂಬಳ: ಸಹಾಯಕ (HR) ಹುದ್ದೆಗಳಿಗೆ – ₹20,000-₹66,000/- ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ- ₹40,000-₹1,40,000/-
ಅರ್ಜಿ ಶುಲ್ಕ: ✓ ಸಹಾಯಕ (HR) ಹುದ್ದೆಗಳಿಗೆ
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹300 ಪ.ಜಾತಿ, ಪ.ಪಂಗಡ, ಇಡಬ್ಲ್ಯೂಎಸ್ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹100
✓ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹600 ಪ.ಜಾತಿ, ಪ.ಪಂಗಡ, ಇಡಬ್ಲ್ಯೂಎಸ್ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹300
ಅರ್ಜಿ ಸಲ್ಲಿಸುವ ವಿಧಾನ • ಅಭ್ಯರ್ಥಿಗಳು RITES ಲಿಮಿಟೆಡ್ ಅಧಿಕೃತ ಜಾಲತಾಣ https://recruit.rites.com/frmRegistration.aspxಕ್ಕೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ನಮೂನೆಯ ವಿವರಗಳನ್ನು ನೀಡಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
• ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
Important Direct Links:
Apply