RITES ಲಿಮಿಟೆಡ್‌ನಲ್ಲಿ ವಿವಿಧ ಉದ್ಯೋಗಾವಕಾಶ

ಅರ್ಜಿ ಸಲ್ಲಿಕೆಗೆ ಏ.27ರವರೆಗೆ ಆದ್ಯತೆ

Published on:

ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿರುವ, ರೈಲ್ವೆ ಸಚಿವಾಲಯದ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ(RITES) ಲಿಮಿಟೆಡ್‌ 15 ಸಹಾಯಕ (ಮಾನವ ಸಂಪನ್ಮೂಲ-HR) ಮತ್ತು 11 ಸಹಾಯಕ ವ್ಯವಸ್ಥಾಪಕ(ಹಣಕಾಸು) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

ಒಟ್ಟು 26 ಸ್ಥಾನಗಳಿಗೆ ನಿಯಮಿತ ಆಧಾರದಡಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆರ್‌ಐಟಿಇಎಸ್‌ ಲಿಮಿಟೆಡ್ ಅಧಿಕೃತ ಜಾಲತಾಣ https://recruit.rites.com/frmRegistration.aspxಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಏ.27ರವರೆಗೆ ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮಾರ್ಚ್ 18, 2026
  • ಸಹಾಯಕ (HR) ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮಾರ್ಚ್ 19, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 27, 2026

ಶೈಕ್ಷಣಿಕ ಅರ್ಹತೆ:

✓ ಸಹಾಯಕ (HR) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

✓ ಸಹಾಯಕ ವ್ಯವಸ್ಥಾಪಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್/ಕಾಸ್ಟ್ ಅಕೌಂಟೆಂಟ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:

27-04-2026ರಂತೆ;

ಸಹಾಯಕ (HR) ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 32 ವರ್ಷಗಳು

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ಸಂದರ್ಶನ

ಸಂಬಳ:

ಸಹಾಯಕ (HR) ಹುದ್ದೆಗಳಿಗೆ – ₹20,000-₹66,000/-
ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ- ₹40,000-₹1,40,000/-

ಅರ್ಜಿ ಶುಲ್ಕ:

✓ ಸಹಾಯಕ (HR) ಹುದ್ದೆಗಳಿಗೆ

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹300
ಪ.ಜಾತಿ, ಪ.ಪಂಗಡ, ಇಡಬ್ಲ್ಯೂಎಸ್ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹100

✓ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹600
ಪ.ಜಾತಿ, ಪ.ಪಂಗಡ, ಇಡಬ್ಲ್ಯೂಎಸ್ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹300

ಅರ್ಜಿ ಸಲ್ಲಿಸುವ ವಿಧಾನ

• ಅಭ್ಯರ್ಥಿಗಳು RITES ಲಿಮಿಟೆಡ್ ಅಧಿಕೃತ ಜಾಲತಾಣ https://recruit.rites.com/frmRegistration.aspxಕ್ಕೆ ಭೇಟಿ ನೀಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ನಮೂನೆಯ ವಿವರಗಳನ್ನು ನೀಡಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Assistant (HR) Official Notification PDFDownload
Assistant Manager (Finance) Official Notification PDFDownload
Online Application FormApply Now
Official Websiterites.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “RITES ಲಿಮಿಟೆಡ್‌ನಲ್ಲಿ ವಿವಿಧ ಉದ್ಯೋಗಾವಕಾಶ”

Leave a Comment