ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಲಿಮಿಟೆಡ್, ಕೇರಳದ ಯೋಜನಾ ಸ್ಥಳಗಳಿಗೆ ವಿವಿಧ ಎಂಜಿನಿಯರ್ ವೃತ್ತಿಪರರ ಅಗತ್ಯವಿದ್ದು, ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆ.26 ಕೊನೆದಿನವಾಗಿದೆ.
ವಿವಿಧ ವಿಭಾಗಗಳಿಗೆ ಟೀಮ್ ಲೀಡರ್(09), ಪ್ರಾಜೆಕ್ಟ್ ಎಂಜಿನಿಯರ್(08) ಹಾಗೂ ಜೂನಿಯರ್ ಎಂಜಿನಿಯರ್(31) ಸೇರಿ ಒಟ್ಟು 48 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು RITES ಲಿಮಿಟೆಡ್ ಅಧಿಕೃತ ಜಾಲತಾಣ https://recruit.rites.com/frmRegistration.aspxಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜನವರಿ 22, 2026
- ಟೀಮ್ ಲೀಡರ್ ಹಾಗೂ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 24, 2026
- ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 26, 2026
- ನೇರ ಸಂದರ್ಶನದ ಪ್ರಮುಖ ದಿನಾಂಕಗಳು – ಫೆಬ್ರವರಿ 24-27, 2026
ಶೈಕ್ಷಣಿಕ ಅರ್ಹತೆ:
✓ ಟೀಮ್ ಲೀಡರ್ ಹಾಗೂ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ (ಸಿವಿಲ್/ಎಲೆಕ್ಟ್ರಿಕಲ್/ಮೆಕ್ಯಾನಿಕಲ್) ಎಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
✓ ಜೂನಿಯರ್ ಎಂಜಿನಿಯರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು. ಅಥವಾ ಸಿವಿಲ್/ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.
*ಜೊತೆಗೆ ನಿಗದಿತ ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ವಯೋಮಿತಿ:
ಫೆಬ್ರವರಿ 24, 26, 2026
• ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಅಥವಾ ದಾಖಲೆ ಪರಿಶೀಲನೆ ಅಥವಾ ಸಂದರ್ಶನ
ಸಂಬಳ:
ಟೀಮ್ ಲೀಡರ್ ಹುದ್ದೆಗಳಿಗೆ ₹70,000 – 2,00,000
ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ – ₹50,000 – 1,60,000
ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ – ₹18940 – 46,417
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ RITES ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://recruit.rites.com/frmRegistration.aspx ಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ನಮೂನೆಯ ವಿವರಗಳನ್ನು ನೀಡಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
• ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
ನೇರ ಸಂದರ್ಶನ ನಡೆಯುವ ದಿನಾಂಕ ಹಾಗೂ ಸ್ಥಳ:
✓ ಟೀಮ್ ಲೀಡರ್ ಹಾಗೂ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ – ಫೆಬ್ರವರಿ 23 ಹಾಗೂ 24ರಂದು ಈ ಕೆಳಗಿನ ವಿಳಾಸದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ.
ರೈಟ್ಸ್ ಲಿಮಿಟೆಡ್, ಶಿಖರ್, ಪ್ಲಾಟ್ ಸಂಖ್ಯೆ 1, ಸೆಕ್ಟರ್ – 29, ಇಫ್ಕೊ ಚೌಕ್ ಮೆಟ್ರೋ ನಿಲ್ದಾಣದ ಹತ್ತಿರ, ಗುರುಗ್ರಾಮ್ – 122001, ಹರಿಯಾಣ
✓ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಫೆಬ್ರವರಿ 25 ಹಾಗೂ 27ರಂದು ಈ ಕೆಳಗಿನ ವಿಳಾಸದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ.
ರೈಟ್ಸ್ ಲಿಮಿಟೆಡ್, ನೆಲ ಮಹಡಿ, ಕ್ಯಾಲ್ಸರ್ ಹೀದರ್ ಪುನ್ನೆನ್ ರಸ್ತೆ, ಹಿಲ್ಟನ್ ಹೋಟೆಲ್ ಎದುರು, ಪ್ರತಿಮೆ, ತಿರುವನಂತಪುರಂ- 695001
Important Direct Links:
| Official Notification PDF | Download |
| Online Application Form Link | Apply Now |
| Official Website | https://rites.com/ |
| More Updates | KarnatakaHelp.in |
Please jobs
Please job