RITES ಲಿಮಿಟೆಡ್‌ನಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ

ಡಿಪ್ಲೊಮಾ ಅಭ್ಯರ್ಥಿಗಳಿಗೆ ಆದ್ಯತೆ

Published on:

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಲಿಮಿಟೆಡ್‌ನ ಬಹು ಎಂಜಿನಿಯರಿಂಗ್ ವೃತ್ತಿಪರರನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ಪ್ರದೇಶಗಳಿಗೆ ಮೆಕ್ಯಾನಿಕಲ್ ವಿಭಾಗಕ್ಕೆ 150 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಡಿ.30 ಕೊನೆದಿನವಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು RITES ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ಲಿಂಕ್‌ https://recruit.rites.com/frmRegistration.aspxಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – ಡಿಸೆಂಬರ್ 09, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 30, 2025
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 30, 2025
  • ಲಿಖಿತ ಪರೀಕ್ಷೆಯ ದಿನಾಂಕ – ಜನವರಿ 11, 2026

ಪ್ರದೇಶವಾರು ಖಾಲಿ ಇರುವ ಹುದ್ದೆಗಳ ವಿವರ:

ಉತ್ತರ ಪ್ರದೇಶ – 50 ಹುದ್ದೆಗಳು
ಪೂರ್ವ ಪ್ರದೇಶ – 75 ಹುದ್ದೆಗಳು
ಪಶ್ಚಿಮ ಪ್ರದೇಶ – 10 ಹುದ್ದೆಗಳು
ದಕ್ಷಿಣ ಪ್ರದೇಶ – 15 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

RITES ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ (ಮೆಕ್ಯಾನಿಕಲ್/ಪ್ರೊಡಕ್ಷನ್/ಪ್ರೊಡಕ್ಷನ್ ಮತ್ತು ಇಂಡಸ್ಟ್ರಿಯಲ್/ಮ್ಯಾನಿಫ್ಯಾಕ್ಚರಿಂಗ್/ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್) ವಿಭಾಗದ ಇಂಜಿನಿಯರಿಂಗ್‌ನಲ್ಲಿ ಪೂರ್ಣ ಸಮಯದ ಡಿಪ್ಲೋಮಾ ಪೂರ್ಣಗೊಳಿಸಿರಬೇಕು. ಜೊತೆಗೆ ಎರಡು ವರ್ಷದ ಕೆಲಸದ ಅನುಭವ ಹೊಂದಿರಬೇಕು.

ವಯೋಮಿತಿ:

30-12-2025 ರಂತೆ;

ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು

ವಯೋಮಿತಿ ಸಡಿಲಿಕೆ; ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು. ಒಬಿಸಿ, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – ಸರ್ಕಾರಿ ಆದೇಶಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಹಂತ I: ಲಿಖಿತ ಪರೀಕ್ಷೆ
ಹಂತ II: ದಾಖಲೆ ಪರಿಶೀಲನೆ

ಸಂಬಳ:

RITES ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 16,338ರೂ.ಗಳಿಂದ 29,735ರೂ.ವರೆಗೆ ಮಾಹೆಯಾನ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 300ರೂ.
ಪ.ಜಾತಿ, ಪ.ಪಂಗಡ, ಇಡಬ್ಲ್ಯೂಎಸ್ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 100ರೂ.

ಅರ್ಜಿ ಸಲ್ಲಿಸುವ ಸುಲಭ ವಿಧಾನ:

• RITES ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://recruit.rites.com/frmRegistration.aspxಗೆ ಭೇಟಿ ನೀಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ನಮೂನೆಯ ವಿವರಗಳನ್ನು ನೀಡಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ಅರ್ಜಿ ನಮೂನೆಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websiterites.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “RITES ಲಿಮಿಟೆಡ್‌ನಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ”

Leave a Comment