RPF SI Admit Card 2024: ರೈಲ್ವೆ ನೇಮಕಾತಿ ಮಂಡಳಿ, ರೈಲ್ವೆ ಪ್ರೊಟೆಕ್ಷನ್ ಫೋರ್ಸ್’ದಲ್ಲಿ ಖಾಲಿ ಇರುವ ಒಟ್ಟು 452 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಪರೀಕ್ಷೆಯು 02, 03, 09,13 ಮತ್ತು 12 ಡಿಸೆಂಬರ್ 2024 ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಪರೀಕ್ಷೆಗೆ ಸಂಬಂಧಪಟ್ಟ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ದಿನಾಂಕ ಮತ್ತು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಪರೀಕ್ಷೆಗೆ ಸಂಬಂಧಪಟ್ಟ ಪ್ರವೇಶ ಪತ್ರವನ್ನು ಬಿಡುಗಡೆಯಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.