ರೈಲ್ವೆ ಇಲಾಖೆ: ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ಬೃಹತ್‌ ಭರ್ತಿ

Published on:

ರೈಲ್ವೆ ನೇಮಕಾತಿ ಮಂಡಳಿಯು ಕೇಂದ್ರೀಕೃತ ಉದ್ಯೋಗ ಸೂಚನೆ ಸಂಖ್ಯೆ 01/2026ರಡಿ ಒಟ್ಟು 11,127 ಅಸಿಸ್ಟೆಂಟ್ ಲೋಕೋ ಪೈಲೆಟ್(ಎಎಲ್‌ಪಿ) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಅರ್ಜಿ ಸಲ್ಲಿಸಲು ಮೇ 15ರಿಂದ ಜೂನ್ 14ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ರೈಲ್ವೆ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಆರ್‌ಆರ್‌ಬಿ ಅಧಿಕೃತ ಜಾಲತಾಣ https://www.rrbapply.gov.in/ಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – ಮೇ 15, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 14, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 14, 2026
  • ಪರೀಕ್ಷಾ ದಿನಾಂಕ – ಶೀಘ್ರದಲ್ಲಿಯೇ ತಿಳಿಸಲಾಗುವುದು

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ, ಸಂಬಂಧಿತ ವಿಭಾಗದಲ್ಲಿ ಡಿಪ್ಲೋಮಾ/ಐಟಿಐ ಪೂರ್ಣಗೊಳಿಸಿರಬೇಕು.

ಹೆಚ್ಚಿನ ವಿದ್ಯಾರ್ಹತೆ ಮಾಹಿತಿಗಾಗಿ ಅಭ್ಯರ್ಥಿಗಳು ತಪ್ಪದೇ ವಿವರವಾದ ಅಧಿಕೃತ ಅಧಿಸೂಚನೆಯನ್ನು ಓದಬೇಕು.

ವಯೋಮಿತಿ:

01-07-2026 ರಂತೆ;

ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು

ವಯೋಮಿತಿ ಸಡಿಲಿಕೆ: ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ವಿಧಾನ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT-I)
  • ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT-II)
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಅಭ್ಯರ್ಥಿಗಳಿಗೆ ಆರಂಭದಲ್ಲಿ ಮಾಹೆಯಾನ ₹19,900 ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಓಬಿಸಿ, ಇ.ಡಬ್ಲ್ಯೂ.ಎಸ್ ಅಭ್ಯರ್ಥಿಗಳಿಗೆ – ₹500/-
ಪ.ಜಾತಿ, ಪ.ಪಂಗಡ, ತೃತೀಯ ಲಿಂಗಿ, ಮಹಿಳೆಯರು, ಅಲ್ಪಸಂಖ್ಯಾತರು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ₹250/-

ಅರ್ಜಿ ಸಲ್ಲಿಸುವ ವಿಧಾನ

• ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಪ್ಪದೇ ವಿವರವಾದ ಅಧಿಸೂಚನೆಯನ್ನು ಓದಬೇಕು.

• ಬಳಿಕ ಆರ್‌ಆರ್‌ಬಿ ಅಧಿಕೃತ ಜಾಲತಾಣ https://indianrailways.gov.in/railwayboard/view_section.jsp?lang=0&id=0,7,1281 ಕ್ಕೆ ಭೇಟಿ ನೀಡಿ.

• ನಿಮ್ಮ ಸಂಬಂಧಿತ/ನೀವು ಅರ್ಜಿ ಸಲ್ಲಿಸ ಬಯಸುವ ರಾಜ್ಯದ ಆರ್.ಆರ್.ಬಿ ಅಧಿಕೃತ ಜಾಲತಾಣವನ್ನು ಆಯ್ಕೆ ಮಾಡಿ.

• ನಂತರ ಮುಖಪುಟದಲ್ಲಿ ನೀಡಲಾದ (ಸಿಇಎನ್) ಸಂಖ್ಯೆ 01/2026 ಸಹಾಯಕ ಲೋಕೋ ಪೈಲಟ್ (ALP) ನೇಮಕಾತಿ ಅರ್ಜಿ ನಮೂನೆ – “ಅನ್ವಯಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ. (ಅಥವಾ ನೇರವಾಗಿ https://www.rrbapply.gov.in/ಗೆ ಭೇಟಿ ನೀಡಿ)

• ಬಳಿಕ ನಿಮ್ಮ RRB ಖಾತೆಗೆ ಆಧಾರ್ ಮೂಲಕ ಸೈನ್ ಇನ್ ಮಾಡಿ. ಅಥವಾ ಹೊಸ ಅರ್ಜಿದಾರರಾಗಿದ್ದಲ್ಲಿ ಹೊಸ ಖಾತೆ ತೆರೆಯಿರಿ.

• ಮುಂದುವರೆದಂತೆ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official WebsiteRRBs
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

11 thoughts on “ರೈಲ್ವೆ ಇಲಾಖೆ: ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ಬೃಹತ್‌ ಭರ್ತಿ”

Leave a Comment