ರೈಲ್ವೆ ನೇಮಕಾತಿ ಮಂಡಳಿಯು ಸಿಇಎನ್ ಸಂಖ್ಯೆ08/2025ರಡಿ ರೈಲ್ವೆ ಇಲಾಖೆಯಲ್ಲಿನ ವಿವಿಧ ಗ್ರೂಪ್-ಡಿ ಹುದ್ದೆಗಳ ಭರ್ತಿಗಾಗಿ ಕಿರು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಡಿ.30ರಿಂದ ಆರಂಭವಾಗಲಿದೆ.
ಹಿರಿಯ ಪ್ರಚಾರ ನಿರೀಕ್ಷಕ, ಪ್ರಯೋಗಾಲಯ ಸಹಾಯಕ ಗ್ರೇಡ್ III, ಮುಖ್ಯ ಕಾನೂನು ಸಹಾಯಕ, ಕಿರಿಯ ಅನುವಾದಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ವೈಜ್ಞಾನಿಕ ಸಹಾಯಕ ಸೇರಿದಂತೆ ಒಟ್ಟು 311 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಜನವರಿ 29ರೊಳಗೆ ಆರ್ಆರ್ಬಿ ಅಧಿಕೃತ ಪೋರ್ಟಲ್ https://www.rrbapply.gov.in/ಗೆ ಭೇಟಿ ಅರ್ಜಿ ಸಲ್ಲಿಸಬಹುದು.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಡಿಸೆಂಬರ್ 30, 2025
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 29, 2026
ಖಾಲಿ ಇರುವ ಹುದ್ದೆಗಳ ವಿವರ
ಹಿರಿಯ ಪ್ರಚಾರ ನಿರೀಕ್ಷಕರು – 15 ಹುದ್ದೆಗಳು ಪ್ರಯೋಗಾಲಯ ಸಹಾಯಕ ಗ್ರೇಡ್ III (ರಸಾಯನಶಾಸ್ತ್ರಜ್ಞ ಮತ್ತು ಲೋಹಶಾಸ್ತ್ರಜ್ಞ) – 39 ಹುದ್ದೆಗಳು ಮುಖ್ಯ ಕಾನೂನು ಸಹಾಯಕ – 22 ಹುದ್ದೆಗಳು ಕಿರಿಯ ಅನುವಾದಕ (ಹಿಂದಿ) – 202 ಹುದ್ದೆಗಳು ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕರು – 24 ಹುದ್ದೆಗಳು ಪಬ್ಲಿಕ್ ಪ್ರಾಸಿಕ್ಯೂಟರ್ – 07 ಹುದ್ದೆಗಳು ವೈಜ್ಞಾನಿಕ ಸಹಾಯಕ (ತರಬೇತಿ) – 02 ಹುದ್ದೆಗಳು
ಒಟ್ಟು – 311 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾವಿದ್ಯಾಲಯ/ಸಂಸ್ಥೆಯಿಂದ ಎಸ್ಸೆಸ್ಸೆಲ್ಸಿ ಅಥವಾ ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
ಅತಿ ಶೀಘ್ರದಲ್ಲೇ ವಿವರವಾದ ಅಧಿಸೂಚನೆ ಬಿಡುಗಡೆಯಾಗಲಿದ್ದು, ವಿದ್ಯಾರ್ಹತೆ ಮಾಹಿತಿಯಲ್ಲಿ ಏನಾದರೂ ಬದಲಾವಣೆಯಿದ್ದಲ್ಲಿ ನವೀಕರಿಸಲಾಗುವುದು.
ವಯೋಮಿತಿ:
✓ ಎಲ್ಲಾ ಹುದ್ದೆಗಳಿಗೂ ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ✓ ಪ್ರಯೋಗಾಲಯ ಸಹಾಯಕ ಗ್ರೇಡ್ III ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು ✓ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳಿಗೆ – ಗರಿಷ್ಠ ವಯಸ್ಸಿನ ಮಿತಿ 32 ವರ್ಷಗಳು ✓ ಹಿರಿಯ ಪ್ರಚಾರ ನಿರೀಕ್ಷಕರು, ಕಿರಿಯ ಅನುವಾದಕ ಹಾಗೂ ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕರು ಹುದ್ದೆಗಳಿಗೆ – ಗರಿಷ್ಠ ವಯಸ್ಸಿನ ಮಿತಿ 33 ವರ್ಷಗಳು ✓ ವೈಜ್ಞಾನಿಕ ಸಹಾಯಕ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು ✓ ಮುಖ್ಯ ಕಾನೂನು ಸಹಾಯಕ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ -1 (CBT-I) ಕಂಪ್ಯೂಟರ್ ಆಧಾರಿತ ಪರೀಕ್ಷೆ – 2 (CBT-II) ಕೌಶಲ್ಯ ಪರೀಕ್ಷೆ/ಟೈಪಿಂಗ್ ಪರೀಕ್ಷೆ ದಾಖಲೆ ಪರಿಶೀಲನೆ ವೈದ್ಯಕೀಯ ಪರೀಕ್ಷೆ
ಸಂಬಳ:
ಆರ್.ಆರ್.ಬಿ ನಿಯಮಗಳ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 35,400ರೂ.ಗಳಿಂದ 44,900ರೂ.ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ₹500 ಪ.ಜಾತಿ, ಪ.ಪಂಗಡ, ಇಬಿಸಿ, ಇಎಸ್ಎಂ, ತೃತಿಯಲಿಂಗಿ, ಅಲ್ಪಸಂಖ್ಯಾತ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ₹250
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• RRBಯ ಅಧಿಕೃತ ಆನ್ಲೈನ್ ಪೋರ್ಟಲ್ https://www.rrbapply.gov.in/ಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ/ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಲಾಗಿನ್ ಆದ ನಂತರ “ಸಿಇಎನ್ ಸಂಖ್ಯೆ 08/2025 – ಪ್ರತ್ಯೇಕ ವರ್ಗದ ವಿವಿಧ ಹುದ್ದೆಗಳಿಗೆ ನೇಮಕಾತಿ- 2025” ಜಾಹೀರಾತನ್ನು ವೀಕ್ಷಿಸಿ “ಅನ್ವಯಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸ ಬಯಸುವ ಹುದ್ದೆಗಳನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ನಮೂದಿಸಿ. ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Hyy
I am also janing is post
Hi
females are applicable or not