ರೈಲ್ವೆ ನೇಮಕಾತಿ ಮಂಡಳಿಯು (CEN)ಸಂಖ್ಯೆ.05/2025)ರ ಅಡಿಯಲ್ಲಿ ಒಟ್ಟು 2570 ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಕಿರು ಅಧಿಸೂಚನೆಯನ್ನು ಹೊರಡಿಸಿದೆ, ಅರ್ಜಿ ಸಲ್ಲಿಕೆ ಅ.31ರಿಂದ ಪ್ರಾರಂಭವಾಗಲಿದೆ.
ಭಾರತದಾದ್ಯಂತ ರೈಲ್ವೆಯ ವಿವಿಧ ವೃಂದಗಳಲ್ಲಿ ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ & ಮೆಟಲರ್ಜಿಕಲ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ರೈಲ್ವೆ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್ಆರ್ಬಿ ಅಧಿಕೃತ ಜಾಲತಾಣ https://rrbapply.gov.in/ಕ್ಕೆ ಭೇಟಿ ನೀಡಿ. ನ.30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಕಿರುಪ್ರಕಟಣೆಯ ದಿನಾಂಕ – ಸೆಪ್ಟೆಂಬರ್ 29, 2025
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – ಅಕ್ಟೋಬರ್ 31, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 30, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಂಜಿನಿಯರಿಂಗ್ ಪದವಿ/ಡಿಪ್ಲೊಮಾ/ಬಿ.ಎಸ್ಸಿ ಅಥವಾ ತತ್ಸಮಾನ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು. (ವಿವರವಾದ ಶೈಕ್ಷಣಿಕ ಅರ್ಹತೆಗಳಿಗಾಗಿ ಅಭ್ಯರ್ಥಿಗಳು ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು)
ವಯೋಮಿತಿ:
01-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 33 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ;
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1)
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-2)
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭದಲ್ಲಿ 35,400ರೂ.ಗಳವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ, ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 500 ರೂ.
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ತೃತೀಯ ಲಿಂಗಿ, ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 250ರೂ.
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಪ್ಪದೇ ವಿವರವಾದ ಅಧಿಸೂಚನೆಯನ್ನು ಓದಬೇಕು ನಂತರ
• ಆರ್ಆರ್ಬಿ ಅಧಿಕೃತ ಜಾಲತಾಣ https://rrbapply.gov.in/ಕ್ಕೆ ಭೇಟಿ ನೀಡಿ.
• ಬಳಿಕ ನಿಮ್ಮ RRB ಖಾತೆಗೆ ಆಧಾರ್ ಮೂಲಕ ಸೈನ್ ಇನ್ ಮಾಡಿ. ಅಥವಾ ಹೊಸ ಅರ್ಜಿದಾರರಾಗಿದ್ದಲ್ಲಿ ಹೊಸ ಖಾತೆ ತೆರೆಯಿರಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Mahantesh
I am completed B.com