ರೈಲ್ವೆ ನೇಮಕಾತಿ ಮಂಡಳಿಯು (CEN)ಸಂಖ್ಯೆ.05/2025)ರ ಅಡಿಯಲ್ಲಿ ಒಟ್ಟು 2569 ಜೂನಿಯರ್ ಎಂಜಿನಿಯರ್(JE) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ, ಅರ್ಜಿ ಸಲ್ಲಿಕೆ ಅ.31ರಿಂದ ಪ್ರಾರಂಭವಾಗಲಿದೆ.
ಭಾರತದಾದ್ಯಂತ ರೈಲ್ವೆಯ ವಿವಿಧ ವೃಂದಗಳಲ್ಲಿ ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ & ಮೆಟಲರ್ಜಿಕಲ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ರೈಲ್ವೆ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ಜಾಲತಾಣ https://rrbapply.gov.in/ಕ್ಕೆ ಭೇಟಿ ನೀಡಿ. ನ.30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಕಿರುಪ್ರಕಟಣೆಯ ದಿನಾಂಕ – ಸೆಪ್ಟೆಂಬರ್ 29, 2025
ವಿವರವಾದ ಅಧಿಕೃತ ಅಧಿಸೂಚನೆಯ ದಿನಾಂಕ – ಅಕ್ಟೋಬರ್ 28, 2025
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – ಅಕ್ಟೋಬರ್ 31, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 30, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಂಜಿನಿಯರಿಂಗ್ ಪದವಿ/ಡಿಪ್ಲೊಮಾ/ಬಿ.ಎಸ್ಸಿ ಅಥವಾ ತತ್ಸಮಾನ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು. (ವಿವರವಾದ ಶೈಕ್ಷಣಿಕ ಅರ್ಹತೆಗಳಿಗಾಗಿ ಅಭ್ಯರ್ಥಿಗಳು ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು)
ವಯೋಮಿತಿ:
01-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 33 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ;
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1)
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-2)
ದಾಖಲೆ ಪರಿಶೀಲನೆ(DV)
ವೈದ್ಯಕೀಯ ಪರೀಕ್ಷೆ(ME)
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭದಲ್ಲಿ 35,400ರೂ.ಗಳವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ, ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 500 ರೂ.
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ತೃತೀಯ ಲಿಂಗಿ, ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 250ರೂ.
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಪ್ಪದೇ ವಿವರವಾದ ಅಧಿಸೂಚನೆಯನ್ನು ಓದಬೇಕು ನಂತರ
• ಆರ್‌ಆರ್‌ಬಿ ಅಧಿಕೃತ ಜಾಲತಾಣ https://rrbapply.gov.in/ಕ್ಕೆ ಭೇಟಿ ನೀಡಿ.
• ಬಳಿಕ ನಿಮ್ಮ RRB ಖಾತೆಗೆ ಆಧಾರ್ ಮೂಲಕ ಸೈನ್ ಇನ್ ಮಾಡಿ. ಅಥವಾ ಹೊಸ ಅರ್ಜಿದಾರರಾಗಿದ್ದಲ್ಲಿ ಹೊಸ ಖಾತೆ ತೆರೆಯಿರಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Mahantesh
I am completed B.com
Rrb requpmenet in iri
Jobs
ITI Electrician
Rrb requpmenet in iti
Jobs
Iti basis jobs for rrb requpmenet
Direct apply link send
Pavitra kavlur Basapur dis Gadag
GT
Diploma
Good Opportunity for Graduates
I am Pavithra B studying in BE engineering Davangere
HANEST WOKE
I T I AND DEPLOM POST JE
BA COUMPLITE SEARCH FOR JOB