RRB JE Recruitment 2024: ಭಾರತೀಯ ರೈಲ್ವೆ ಇಲಾಖೆಯು ತನ್ನ ವಿವಿಧ ಪ್ರಾದೇಶಿಕ ವಿಭಾಗಗಳಲ್ಲಿ ಖಾಲಿ ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಜೂನಿಯರ್ ಎಂಜಿನಿಯರ್ (JE), ಡೆಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS), ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ಸೇರಿದಂತೆ ಒಟ್ಟು 7934 ಹುದ್ದೆಗಳ ಪ್ರಾದೇಶಿಕ ವಲಯಗಳ ಅನುಸಾರವಾಗಿ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತದೆ. ಈ ನೇಮಕಾತಿಗೆ ಸಂಬಂಧಿಸಿದಂತೆ 22 ಜುಲೈ 2024 ರಂದು ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರಾದೇಶಿಕ RRB ವೆಬ್‌ಸೈಟ್‌ಗಳಿಂದ ಅಥವಾ rrbapply.gov.in ನಲ್ಲಿ ನೇರ ಲಿಂಕ್‌ನಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ದೇಶದಾದ್ಯಂತ ಇರುವ ಪ್ರಾದೇಶಿಕ ರೈಲ್ವೆ ವಲಯಗಳ ವಿಭಾಗಗಳಿಗೆ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಸುವವರು ಆನ್ ಲೈನ್ ಮೂಲಕವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of RRB JE Notification 2024
Organization Name – Railway Recruitment Board (RRB) Post Name – Junior Engineer (JE) Total Vacancy – 7934 + 17= 7951 Application Process: Online Job Location – All Over India(Karnataka)
ಅರ್ಜಿ ಸಲ್ಲಿಸಲು ಮುಖ್ಯ ದಿನಾಂಕಗಳು:
ಅಧಿಸೂಚನೆ(Short) ಬಿಡುಗಡೆಯ ದಿನಾಂಕ: 22 ಜುಲೈ 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಜುಲೈ 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಆಗಸ್ಟ್ 2024
ಶೈಕ್ಷಣಿಕ ಅರ್ಹತೆ:
ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/B.Tech/Engineering Diploma ಅಥವಾ Degree ಪಡೆರಬೇಕು.
ವಯಸ್ಸಿನ ಮಿತಿ:
ಅರ್ಜಿದಾರರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 36 ವರ್ಷಗಳು ಮೀರಿರಬಾರದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಎರಡು ಹಂತದ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು:
1 ನೇ ಹಂತ: ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
2 ನೇ ಹಂತ: ಉದ್ಯೋಗ ಪರೀಕ್ಷೆ (ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ)