ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (NPTC) ಪದವಿ ಹಾಗೂ ಪದವಿ ಪೂರ್ವ ಹಂತದ ಒಟ್ಟು 8850 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಸ್ಟೇಷನ್ ಮಾಸ್ಟರ್, ಸರಕು ರೈಲು ನಿರ್ವಾಹಕ, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ರೈಲು ಗುಮಾಸ್ತ ಸೇರಿ ವಿವಿಧ ವೃಂದಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪದವಿ ಹಂತದಲ್ಲಿ 5,000 ಹುದ್ದೆಗಳು ಹಾಗೂ ಪದವಿ ಪೂರ್ವ ಹಂತದಲ್ಲಿ 3,050 ಹುದ್ದೆಗಳ ಭರ್ತಿಯಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್ಆರ್ಬಿ ಅಧಿಕೃತ ವೆಬ್ಸೈಟ್ https://www.rrbapply.gov.in/ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 21, 2025
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 20, 2025
ಪದವಿ ಪೂರ್ವ ಹಂತದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕಗಳು;
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 28, 2025
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 27, 2025
ಶೈಕ್ಷಣಿಕ ಅರ್ಹತೆ:
✓ ಪದವಿ ಪೂರ್ವ ಹಂತದ ಹುದ್ದೆಗಳಿಗೆ ವಿದ್ಯಾರ್ಹತೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
✓ ಪದವಿ ಹಂತದ ಹುದ್ದೆಗಳಿಗೆ ವಿದ್ಯಾರ್ಹತೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು ಅಥವಾತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
✓ ಪದವಿ ಪೂರ್ವ ಹಂತದ ಹುದ್ದೆಗಳಿಗೆ – ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 33 ವರ್ಷಗಳು
✓ ಪದವಿ ಹಂತದ ಹುದ್ದೆಗಳಿಗೆ – ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 36 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ -1(CBT-I)
ಕಂಪ್ಯೂಟರ್ ಆಧಾರಿತ ಪರೀಕ್ಷೆ – 2 (CBT-II)
ಕೌಶಲ್ಯ ಪರೀಕ್ಷೆ/ಟೈಪಿಂಗ್ ಪರೀಕ್ಷೆ/ಆಪ್ಟಿಟ್ಯೂಡ್ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ಆರ್ ಆರ್ ಬಿ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 16,000ರೂ. ಗಳಿಂದ 35,000ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 500ರೂ.
• ಪ.ಜಾತಿ, ಪ.ಪಂಗಡ, ಇಬಿಸಿ, ಇಎಸ್ಎಂ, ತೃತಿಯಲಿಂಗಿ, ಅಲ್ಪಸಂಖ್ಯಾತ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 250ರೂ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• RRB ಅಧಿಕೃತ ಜಾಲತಾಣ https://www.rrbapply.gov.in/#/auth/landing ಕ್ಕೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಲಾಗಿನ್ ಆದ ನಂತರ “ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿ ಹಾಗೂ ಪದವಿ ಪೂರ್ವ ಹಂತದ ಹುದ್ದೆಗಳ ನೇಮಕಾತಿ-2025” ಜಾಹೀರಾತನ್ನು ವೀಕ್ಷಿಸಿ ಅನ್ವಯಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸ ಬಯಸುವ ಹುದ್ದೆಗಳನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.