RRB NTPC ಪದವಿ ಹಂತದ ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಪರೀಕ್ಷೆ(CBAT) ದಿನಾಂಕ ನಿಗದಿ

Published on:

ರೈಲ್ವೆ ನೇಮಕಾತಿ ಮಂಡಳಿಯು CEN05/2024ರಡಿ ಅಧಿಸೂಚಿಸಲಾದ ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಹಂತದ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಪರೀಕ್ಷೆಯ ವೇಳಾಪಟ್ಟಿಯನ್ನು (ಡಿ.16)ರಂದು ಬಿಡುಗಡೆ ಮಾಡಿದೆ.

ಒಟ್ಟು 8113 ಹುದ್ದೆಗಳ ಭರ್ತಿಗಾಗಿ ಸಿಬಿಟಿ-I ಹಾಗೂ ಸಿಬಿಟಿ-II ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಪರೀಕ್ಷೆ (CBAT)ಯನ್ನು ಡಿ.28ರಂದು ನಡೆಸಲು ನಿರ್ಧರಿಸಲಾಗಿದೆ. ಸದರಿ CBAT ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಆರ್‌ಆರ್‌ಬಿಯ ಪ್ರಾದೇಶಿಕ ಜಾಲತಾಣ https://indianrailways.gov.in/railwayboard/view_section.jsp?lang=0&id=0,7,1281ದಲ್ಲಿ ಬಿಡುಗಡೆ ಮಾಡಲಾಗಿದೆ, ಅರ್ಹ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಪರಿಶೀಲಿಸಬಹುದು.

ಪ್ರವೇಶ ಪತ್ರ ಯಾವಾಗ ಬಿಡುಗಡೆ?

ಪರೀಕ್ಷಾ ದಿನಾಂಕಕ್ಕೆ 4 ದಿನಗಳ ಮೊದಲು ಅಂದರೆ (ಡಿಸೆಂಬರ್ 24 ರಂದು) ಪರೀಕ್ಷಾ ನಗರ ಮತ್ತು ದಿನಾಂಕ ಸೂಚನೆಗಳನ್ನು ಒಳಗೊಂಡ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು 4 ದಿನಗಳ ಮೊದಲು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RRB NTPC GRADUATE LEVEL CBAT ವೇಳಾಪಟ್ಟಿ ಡೌನ್ಲೋಡ್ ಮಾಡುವ ವಿಧಾನ.

• ಆರ್.ಆರ್.ಬಿ ಅಧಿಕೃತ ವೆಬ್ಸೈಟ್ https://indianrailways.gov.in/railwayboard/view_section.jsp?lang=0&id=0,7,1281 ಗೆ ಭೇಟಿ ನೀಡಿ.

• ನೀವು ಅರ್ಜಿ ಸಲ್ಲಿಸಿದ ರಾಜ್ಯ (ನಿಮ್ಮ ಸಂಬಂಧಿತ) RRB ಅಧಿಕೃತ ವೆಬ್ಸೈಟ್ ಅನ್ನು ಆಯ್ಕೆ ಮಾಡಿ.

• ನಂತರ ಇತ್ತೀಚಿನ ನವೀಕರಣಗಳು ವಿಭಾಗದಲ್ಲಿ ನೀಡಲಾಗಿರುವ “CEN 05/2024 NE 16-12-2025- CBAT ವೇಳಾಪಟ್ಟಿ ಸೂಚನೆ” ಲಿಂಕ್ ಮೇಲೆ ಕ್ಲಿಕ್ ಮಾಡಿ.

• ನಂತರ RRB NPTC GRADUATE LEVEL CBAT ವೇಳಾಪಟ್ಟಿ ಅನ್ನು ಪರಿಶೀಲಿಸಿಕೊಳ್ಳಿ.

Important Direct Links:

RRB NTPC Graduate Level CBAT Date 2025 Notice PDFDownload
Official WebsiteRRBs
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment