ರೈಲ್ವೆ ನೇಮಕಾತಿ ಮಂಡಳಿಯು CEN 06/2024ರ ಅಡಿಯಲ್ಲಿ ಅಧಿಸೂಚಿಸಲಾದ NTPC ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಪೂರ್ವ ಹಂತದ ಹುದ್ದೆಗಳ ನೇಮಕಾತಿಗಾಗಿ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-1ರ ಫಲಿತಾಂಶವನ್ನು ನ.21ರಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಒಟ್ಟು 3445 ಹುದ್ದೆಗಳ ನೇಮಕಾತಿ ಸಂಬಂಧ ಮೊದಲನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ -1 ಅನ್ನು ಆಗಸ್ಟ್ 07 ರಿಂದ ಸೆಪ್ಟೆಂಬರ್ 09 ರವರೆಗೆ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಸದರಿ ಪರೀಕ್ಷೆಯ ಫಲಿತಾಂಶವನ್ನು RRB ಅಧಿಕೃತ ಜಾಲತಾಣ https://indianrailways.gov.in/railwayboard/view_section.jsp?lang=0&id=0,7,1281ದಲ್ಲಿ ಬಿಡುಗಡೆ ಮಾಡಲಾಗಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಬಹುದು.
• ಆರ್ ಆರ್ ಬಿ ಅಧಿಕೃತ ವೆಬ್ಸೈಟ್ https://indianrailways.gov.in/railwayboard/view_section.jsp?lang=0&id=0,7,1281 ಗೆ ಭೇಟಿ ನೀಡಿ.
• ನೀವು ಅರ್ಜಿ ಸಲ್ಲಿಸಿದ ರಾಜ್ಯ (ನಿಮ್ಮ ಸಂಬಂಧಿತ)RRB ಅಧಿಕೃತ ವೆಬ್ಸೈಟ್ ಅನ್ನು ಆಯ್ಕೆ ಮಾಡಿ.
• ನಂತರ ಇತ್ತೀಚಿನ ಸೂಚನೆಗಳು ವಿಭಾಗದಲ್ಲಿ ನೀಡಲಾಗಿರುವ “RRB NTPC -CEN 06/2024 (ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಪೂರ್ವ ಹಂತದ) CBT-1 ಫಲಿತಾಂಶಗಳ ಪ್ರಕಟಣೆ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಫಲಿತಾಂಶದ ಪಿಡಿಎಫ್ ತೆರೆಯುತ್ತದೆ. ಪಿಡಿಎಫ್ ನಲ್ಲಿ CBT-1 ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಅನ್ನು ನಮೂದಿಸಿರಲಾಗುತ್ತದೆ.
• ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆಯ ಮೂಲಕ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದು.
• ನಿಮ್ಮ ನೋಂದಣಿ ಸಂಖ್ಯೆ ಪಿಡಿಎಫ್ ನಲ್ಲಿ ಲಭ್ಯವಿದ್ದರೆ ನೀವು ಎರಡನೇ ಹಂತದ CBT-2 ಪರೀಕ್ಷೆಗೆ ಅರ್ಹತೆ ಪಡೆದಿರುತ್ತೀರಿ.
• ಭವಿಷ್ಯದ ಬಳಕೆಗಾಗಿ ಅಭ್ಯರ್ಥಿಗಳು ಫಲಿತಾಂಶದ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
RRB NPTC (UG) CBT-2 ಪರೀಕ್ಷೆ
RRB NPTC (UG) ಕಂಪ್ಯೂಟರ್ ಆಧಾರಿತ ಪರೀಕ್ಷೆ-1 ರಲ್ಲಿ ಅರ್ಹತೆ ಪಡೆದು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ನೇಮಕಾತಿಯ ಎರಡನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ-2 ಅನ್ನು ಮುಂದಿನ ದಿನಗಳಲ್ಲಿ ನಡೆಸಲಾಗುತ್ತದೆ. ಈ ಎರಡು ಪರೀಕ್ಷೆಯಲ್ಲಿ ಅರ್ಹತೆ ಪಡೆದ ಬಳಿಕ ಮುಂದಿನ ಪ್ರಕ್ರಿಯೆಗಳಾದ ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯನ್ನು ನಡೆಸಲಾಗುತ್ತದೆ.
Important Direct Links:
RRB NTPC UG CBT-1 Result 2025 Candidates List and Cut-Off List PDF
Hello mam
I have to vacancy job
Bharath kumar