ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಹಂತದ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ರೈಲ್ವೆ ನೇಮಕಾತಿ ಮಂಡಳಿಯು ಬುಧವಾರ ಬಿಡುಗಡೆ ಮಾಡಿದೆ.
ಒಟ್ಟು 3445 ಹುದ್ದೆಗಳ ಭರ್ತಿಗಾಗಿ ನಡೆಸಲಾಗಿದ್ದ ಮೊದಲ ಹಂತ ಕಂಪ್ಯೂಟರ್ ಆಧಾರಿತ ಪರೀಕ್ಷೆ -1 ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗಾಗಿ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ-2 ಅನ್ನು ಡಿಸೆಂಬರ್ 20 ರಂದು ನಡೆಸಲು ನಿರ್ಧರಿಸಲಾಗಿದ್ದು, ಸದರಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಆರ್.ಆರ್.ಬಿಯ ಎಲ್ಲಾ ಪ್ರಾದೇಶಿಕ ಅಧಿಕೃತ ಜಾಲತಾಣ https://indianrailways.gov.in/railwayboard/view_section.jsp?lang=0&id=0,7,1281 ದಲ್ಲಿ ಬಿಡುಗಡೆ ಮಾಡಲಾಗಿದೆ. ಸದರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು CBT-2 ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಶೀಲಿಸಬಹುದು.
ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ-1 ರಲ್ಲಿ ಅರ್ಹತೆ ಪಡೆದು ಶಾರ್ಟ್ ಲಿಸ್ಟ್ ಮಾಡಲಾದ ಸುಮಾರು 51978 ಅಭ್ಯರ್ಥಿಗಳು ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ-2 ಅನ್ನು 2025ರ ಡಿಸೆಂಬರ್ 20ರಂದು (ಶನಿವಾರ) ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಎದುರಿಸಲಿದ್ದಾರೆ.
RRB NTPC (UG) CBT-2 2025 – ಸಿಟಿ ಇಂಟಿಮೇಶನ್ ಸ್ಲಿಪ್
RRB (NTPC) CBT-2 ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳು ಪರೀಕ್ಷಾ ನಗರ ಮಾಹಿತಿ ಚೀಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಪರೀಕ್ಷಾ ನಗರ ಮತ್ತು ದಿನಾಂಕವನ್ನು ವೀಕ್ಷಿಸಲು ಹಾಗೂ SC/ST ಅಭ್ಯರ್ಥಿಗಳಿಗೆ ಪ್ರಯಾಣ ಪ್ರಾಧಿಕಾರವನ್ನು ಡೌನ್ಲೋಡ್ ಮಾಡಲು ಲಿಂಕ್ ಅನ್ನು ಎಲ್ಲಾ RRB ಗಳ ಅಧಿಕೃತ ವೆಬ್ಸೈಟ್ಗಳಲ್ಲಿ ಪರೀಕ್ಷೆಗೆ 10 ದಿನಗಳ ಮೊದಲು ಅಂದರೆ (ಡಿಸೆಂಬರ್ 10ರಂದು) ಸಕ್ರಿಯಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
RRB NTPC (UG) CBT-2 ಪ್ರವೇಶಪತ್ರ:
ಪರೀಕ್ಷಾ ದಿನಾಂಕಕ್ಕೆ 4 ದಿನಗಳ ಮೊದಲು ಅಂದರೆ (ಡಿಸೆಂಬರ್ 15/16 ರಂದು) ಪರೀಕ್ಷಾ ನಗರ ಮತ್ತು ದಿನಾಂಕ ಸೂಚನೆಗಳನ್ನು ಒಳಗೊಂಡ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
Plese give me opportunity
iti