2025-26ನೇ ಸಾಲಿಗೆ ಕೇಂದ್ರ ರೈಲ್ವೆಯಲ್ಲಿ 1961ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ (RRC) ಅಧಿಸೂಚನೆಯನ್ನು ಹೊರಡಿಸಿದೆ.
ಕೇಂದ್ರ ರೈಲ್ವೆ ವ್ಯಾಪ್ತಿಯಲ್ಲಿರುವ ಕಾರ್ಯಾಗಾರಗಳು/ಘಟಕಗಳಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 2,418 ಅಪ್ರೆಂಟಿಸ್ ಹುದ್ದೆಗಳ ತರಬೇತಿಗಾಗಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೇಂದ್ರ ರೈಲ್ವೆ ಅಧಿಕೃತ ವೆಬ್ಸೈಟ್ https://rrccr.com/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಆಗಸ್ಟ್ 12, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 11, 2025
ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
Please job
RRD department