ಕೇಂದ್ರ ರೈಲ್ವೆ(CR)ಯಲ್ಲಿ ಅಪ್ರೆಂಟಿಸ್‌ ನೇಮಕಾತಿ

Published on:

ರೈಲ್ವೆ ನೇಮಕಾತಿ ಕೋಶವು ಅಪ್ರೆಂಟಿಸ್‌ ಕಾಯ್ದೆಯಡಿ ಕೇಂದ್ರ ರೈಲ್ವೆ ವ್ಯಾಪ್ತಿಯಲ್ಲಿರುವ ವಿವಿಧ ಕಾರ್ಯಾಗಾರಗಳು/ಘಟಕಗಳಿಗೆ 51 ಅಭ್ಯರ್ಥಿಗಳನ್ನು ನೇಮಕ ಮಾಡಲು ಪೂರಕ(Supplementary) ಅಧಿಸೂಚನೆ ಹೊರಡಿಸಿದೆ.

ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ನೀಡಲಿದೆ. ಅರ್ಜಿ ಸಲ್ಲಿಸಲು ಏ.09ರವರೆಗೆ ಕಾಲಾವಕಾಶವಿದೆ. ಸದರಿ ತರಬೇತಿಗೆ ಹಾಜರಾಗಬಯಸುವ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಆರ್‌ಆರ್‌ಸಿ ಸಿಆರ್‌ ಅಧಿಕೃತ ಜಾಲತಾಣ https://rrccr.etrpindia.com/rrccrapprentice/applicationIndexದ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಮಾರ್ಚ್ 10, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 09, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 09, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ NCVT/SCVT ಯಿಂದ ನೀಡಲಾದ ಅಧಿಸೂಚಿತ ಟ್ರೇಡ್‌ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:

10-03-2026 ರಂತೆ;

ಕನಿಷ್ಠ ಮಿತಿ 15 ವರ್ಷಗಳು
ಗರಿಷ್ಠ ಮಿತಿ 24 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ
  • ಅಂತಿಮ ಆಯ್ಕೆ

ಸೈಪೆಂಡ್‌:

ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಕಾಯ್ದೆಯ ನಿಯಮಗಳ ಪ್ರಕಾರ ಪ್ರತಿ ತಿಂಗಳು ₹9,600 ಶಿಷ್ಯವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ₹100
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ನೋಂದಣಿಗೆ ಮಾಡುವುದು.?

• ಅಭ್ಯರ್ಥಿಗಳು RRCCR ಅಧಿಕೃತ ಜಾಲತಾಣ https://rrccr.com/Home/Home ಕ್ಕೆ ಭೇಟಿ ನೀಡಿ.

• ಬಳಿಕ ಇತ್ತೀಚಿನ ನವೀಕರಣಗಳು ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ಆಕ್ಟ್ ಅಪ್ರೆಂಟಿಸ್‌ಗಳ ಪೂರಕ ನೇಮಕಾತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ(https://rrccr.etrpindia.com/rrccrapprentice/applicationIndex)” ಆಯ್ಕೆಯನ್ನು ಆರಿಸಿ.

Rrc Cr Apprenticeship 2026 Online Form
Rrc Cr Apprenticeship 2026 Online Form

• ನಂತರ ನೋಂದಣಿ ಐಡಿ, ಪಾಸ್ವರ್ಡ್ ಹಾಗೂ ಕ್ಯಾಪ್ಚಾ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ, ನೋಂದಾಯಿಸಿ.

• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಮೂಲ ಮಾಹಿತಿಗಳು, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websiterrccr.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment