RRC East Central Railway Apprentice Recruitment 2025
ಪೂರ್ವ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ(RRC) ಶುಕ್ರವಾರ(ಸೆ.26) ಅಧಿಸೂಚನೆಯನ್ನು ಹೊರಡಿಸಿದೆ.
ವಿವಿಧ ವಿಭಾಗಗಳು ಹಾಗೂ ಕಾರ್ಯಾಗಾರಗಳಲ್ಲಿ ಫಿಟ್ಟರ್, ಮೆಕಾನಿಕ್ ಕಾರ್ಪೆಂಟರ್, ವೆಲ್ಡರ್ ಹಾಗೂ ಎಲೆಕ್ಟ್ರಿಷಿಯನ್ ಸೇರಿದಂತೆ ಇತರೆ ಒಟ್ಟು 1149 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪೂರ್ವ ಮಧ್ಯ ರೈಲ್ವೆಯ ಅಧಿಕೃತ ಜಾಲತಾಣ https://rrcrail.in/ಕ್ಕೆ ಭೇಟಿ ನೀಡಿ. ಅ.25ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 26, 2025
ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಅಕ್ಟೋಬರ್ 25, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ/ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸಂಬಂಧಿತ ಟ್ರೇಡ್ ಐಟಿಐ (ಅಂದರೆ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ನೀಡಲಾದ ಅಧಿಸೂಚಿತ ಟ್ರೇಡ್ನಲ್ಲಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ ಅಥವಾ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿ/ರಾಜ್ಯ ವೃತ್ತಿಪರ ತರಬೇತಿ ಮಂಡಳಿಯಿಂದ ನೀಡಲಾದ ತಾತ್ಕಾಲಿಕ ಪ್ರಮಾಣಪತ್ರ) ಹೊಂದಿರಬೇಕು.
ವಯೋಮಿತಿ:
25-10-2025 ರಂತೆ;
ಕನಿಷ್ಠ ಮಿತಿ – 15 ವರ್ಷಗಳು
ಗರಿಷ್ಠ ಮಿತಿ – 24 ವರ್ಷಗಳು
ವಯೋಮಿತಿ ಸಡಿಲಿಕೆ: ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು, ಓಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 3 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ:
ಶಾರ್ಟ್ಲಿಸ್ಟಿಂಗ್
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅಂತಿಮ ಆಯ್ಕೆ
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಸಮಯದಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ನಿಯಂತ್ರಿಸುವ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ನಿಗದಿತ ದರದಲ್ಲಿ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ ಹಾಗೂ ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 100ರೂ.
ಅರ್ಜಿ ಸಲ್ಲಿಸುವ ವಿಧಾನ;
• ಪೂರ್ವ ಮಧ್ಯ ರೈಲ್ವೆಯ ಅಧಿಕೃತ ಜಾಲತಾಣ https://rrcrail.in/ಕ್ಕೆ ಭೇಟಿ ನೀಡಿ.
Rrc East Central Railway Apprentice Online Form 2025-26
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Railway