2025-26ನೇ ಸಾಲಿಗೆ ಪೂರ್ವ ರೈಲ್ವೆ (ER)ನಲ್ಲಿ ಒಟ್ಟು 3115 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಜು.31ರಂದು ರೈಲ್ವೆ ನೇಮಕಾತಿ ಕೋಶವು ಅಧಿಸೂಚನೆಯನ್ನು ಹೊರಡಿಸಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ (ಫಿಟ್ಟರ್, ವೆಂಡರ್, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಪೇಂಟರ್, ವೈರ್ ಮೆನ್ ಹಾಗೂ ಇತರೆ) ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಂಡು ತರಬೇತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRCER ಅಧಿಕೃತ ವೆಬ್ಸೈಟ್ https://rrcer.org/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ಅಥವಾ ಅದಕ್ಕೆ ಸಮಾನವಾದ (10+2 ವರ್ಷದೊಳಗಿನ ಪರೀಕ್ಷಾ ವ್ಯವಸ್ಥೆ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು NCVT/SCVT ನೀಡುವ ಅಧಿಸೂಚಿತ ಟ್ರೇಡ್ನಲ್ಲಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ(ಐಟಿಐ)ವನ್ನು ಸಹ ಹೊಂದಿರಬೇಕು.
ವಯೋಮಿತಿ:
ಕನಿಷ್ಠ ಮಿತಿ – 15 ವರ್ಷಗಳು
ಗರಿಷ್ಠ ಮಿತಿ – 24 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳ ಶಾರ್ಟ್ ಲಿಸ್ಟಿಂಗ್
ದಾಖಲೆ ಪರಿಶೀಲನೆ
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ – 100ರೂ.
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for RRC ER Apprentice Recruitment 2025
ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ;
RRCER ಅಧಿಕೃತ ವೆಬ್ಸೈಟ್ https://rrcer.org/ ಗೆ ಭೇಟಿ ನೀಡಿ.
ನೋಂದಾಯಿತ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಪೂರ್ವ ರೈಲ್ವೆ ಘಟಕಗಳಲ್ಲಿ ತರಬೇತಿ ಸ್ಲಾಟ್ಗಾಗಿ ಆಕ್ಟ್ ಅಪ್ರೆಂಟಿಸ್ಗಳ ನೇಮಕಾತಿಗಾಗಿ ಅಧಿಸೂಚನೆ, ಸೂಚನೆ ಸಂಖ್ಯೆ. RRC/ER/ಆಕ್ಟ್ ಅಪ್ರೆಂಟಿಸ್ಗಳು/2025-26* – ಅರ್ಜಿ ನಮೂನೆ ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Hi I’m nagesh suryavanshi