ಉತ್ತರ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶವು ಅಧಿಸೂಚನೆ ಹೊರಡಿಸಿದೆ.
ವಿವಿಧ ವಿಭಾಗಗಳು ಹಾಗೂ ಕಾರ್ಯಾಗಾರಗಳಲ್ಲಿ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ವೈರ್ಮ್ಯಾನ್ ಸೇರಿದಂತೆ ಇತರೆ ಒಟ್ಟು 1763 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಉತ್ತರ ಮಧ್ಯ ರೈಲ್ವೆಯ ಅಧಿಕೃತ ಜಾಲತಾಣ https://examerp.com/ಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 18, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 17, 2025
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ/ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ NCVT/SCVTಯಿಂದ ನೀಡಲಾದ ಸಂಬಂಧಿತ ಟ್ರೇಡ್ನಲ್ಲಿ ITI ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ:
16-09-2025 ರಂತೆ;
ಕನಿಷ್ಠ ಮಿತಿ – 15 ವರ್ಷಗಳು
ಗರಿಷ್ಠ ಮಿತಿ – 24 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು ಓಬಿಸಿ ಅಭ್ಯರ್ಥಿಗಳಿಗೆ – 3 ವರ್ಷಗಳು ಪಿಡಬ್ಲ್ಯೂಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ:
ಶಾರ್ಟ್ಲಿಸ್ಟಿಂಗ್
ದಾಖಲೆ ಪರಿಶೀಲನೆ,ವೈದ್ಯಕೀಯ ಪರೀಕ್ಷೆ
ಅಂತಿಮ ಆಯ್ಕೆ
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಸಮಯದಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ನಿಯಂತ್ರಿಸುವ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ನಿಗದಿತ ದರದಲ್ಲಿ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ, ಲಿಂಗತ್ವ ಅಲ್ಪಸಂಖ್ಯಾತ, ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
• ಉಳಿದ ಎಲ್ಲಾ ಅಭ್ಯರ್ಥಿಗಳಿಗೆ – 100ರೂ.
How to Apply for RRC NCR Apprentice Recruitment 2025
ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ;
• ಉತ್ತರ ಮಧ್ಯ ರೈಲ್ವೆ(NCR) ಅಧಿಕೃತ ವೆಬ್ಸೈಟ್ https://examerp.com/default.aspxಗೆ ಭೇಟಿ ನೀಡಿ.
Rrc Ncr Apprentice Online Form 2025
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಐಡಿ ಹಾಗೂ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ .
• ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Apprenticeship ge already apply madidvi tagollilla elli apprenticeship irodu alli contract number idre haki .. Please