ಪ್ರಯಾಗ್ರಾಜ್: ಉತ್ತರ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಅಧಿನಿಯಮ 1961ರಡಿ ವಿವಿಧ ವಿಭಾಗಗಳು, ಕಾರ್ಯಾಗಾರ ಘಟಕಗಳಿಗೆ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 1853 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು, ಒಂದು ವರ್ಷದ ತರಬೇತಿ ನೀಡಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಜೊತೆಗೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://rrcpryj.org/ ಅಥವಾ https://examerp.com/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ – ಜುಲೈ 08
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 31(ವಿಸ್ತರಣೆ)
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಂಡಳಿ/ಮಹಾವಿದ್ಯಾಲಯದಿಂದ ಎಸ್ಸೆಸ್ಸೆಲ್ಸಿ ಅಥವಾ ದ್ವಿತೀಯ ಪಿಯುಸಿ ಜೊತೆಗೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಅರ್ಹತೆ ಹೊಂದಿರಬೇಕು.
ವಯೋಮಿತಿ:
07-07-2026ರಂತೆ;
ಕನಿಷ್ಠ 15 ವರ್ಷಗಳು, ಗರಿಷ್ಠ 24 ವರ್ಷಗಳು
ಆಯ್ಕೆ ವಿಧಾನ:
- ಮೆರಿಟ್ ಪಟ್ಟಿ
- ದಾಖಲಾತಿ ಪರಿಶೀಲನೆ/ಪ್ರಮಾಣಪತ್ರ ಪರಿಶೀಲನೆ
ಸ್ಟೈಫಂಡ್:
ಸರ್ಕಾರಿ ನಿಯಮಗಳಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಶಿಷ್ಯವೇತನ(ಸ್ಟೈಫಂಡ್) ಇರುತ್ತದೆ.
ಅರ್ಜಿ ಶುಲ್ಕ:
ಎಸ್ಸಿ,ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.100/-
ಅರ್ಜಿ ಸಲ್ಲಿಕೆಯ ವಿಧಾನ:
ಹಂತ-1 ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://examerp.com/ಗೆ ಭೇಟಿ ನೀಡಿ.
ಹಂತ-2 ನಂತರ ಹೊಸ ಅಭ್ಯರ್ಥಿಗಳಾಗಿದ್ದಲ್ಲಿ ಹೊಸ ನೋಂದಣಿ(New Registration नया पंजीकरण) ಮಾಡಿಕೊಂಡು ಅರ್ಜಿ ನಮೂನೆ ಭರ್ತಿ ಮಾಡಲು ಮುಂದಾಗಿ.
ಹಂತ-3 ತದನಂತರ ನಿಮ್ಮ ವರ್ಗಕ್ಕೆ ಅನ್ವಯವಾಗುವ ಅರ್ಜಿ ಶುಲ್ಕ ಪಾವತಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
Important Direct Links:
| Online Application Form Last Date Extension Notice PDF | Download |
| Official Notification PDF | Download |
| Online Application Form Link(Direct Link) | Apply Now |
| Official Website | rrcpryj.org |
| More Updates | KarnatakaHelp.in |
Railway job