2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ವಿವಿಧ ಟ್ರೇಡ್ಗಳಿಗೆ 4116 ಅಪ್ರೆಂಟಿಸ್ ಹುದ್ದೆಗಳ ನಿಯೋಜನೆಗಾಗಿ ಉತ್ತರ ರೈಲ್ವೆ (NR)ಯ ರೈಲ್ವೆ ನೇಮಕಾತಿ ಕೋಶ (RRC)ವು ಅಧಿಸೂಚನೆ ಹೊರಡಿಸಿದೆ.
ಫಿಟ್ಟರ್/ಟರ್ನರ್, ವೆಲ್ಡರ್ (ಜಿ&ಇ), ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಪೇಂಟರ್ (ಜನರಲ್)/ಕಾರ್ಪೆಂಟರ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್)/ಮೆಕ್ಯಾನಿಕ್ (ಡೀಸೆಲ್), ರೆಫ್ರಿಜರೇಟರ್ ಎಸಿ ಮೆಕ್ಯಾನಿಕ್ ಇತರೆ ಸಂಬಂಧಿತ ಟ್ರೇಡ್ಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ತರಬೇತಿ ನೀಡಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು RRCNR ಅಧಿಕೃತ ಜಾಲತಾಣ https://rrcnr.org/ ಕ್ಕೆ ಭೇಟಿ ನೀಡಿ. ಡಿ.24ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 24, 2025
ಆಯ್ಕೆಯಾದ ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ಪ್ರಕಟಿಸುವ ದಿನಾಂಕ – ಫೆಬ್ರವರಿ 2026
ಶೈಕ್ಷಣಿಕ ಅರ್ಹತೆ:
ಅಧಿಕೃತ ಅಧಿಸೂಚನೆಯನ್ನು ಪ್ರಕಾರ, ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣ ಜೊತೆಗೆ ಸಂಬಂಧಿತ ಟ್ರೇಡ್ನಲ್ಲಿ ಐಟಿಐ(ITI) ಉತ್ತೀರ್ಣರಾದ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ:
24-12-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 15 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 24 ವರ್ಷಗಳು
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪಿಡಬ್ಲ್ಯೂಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಕಿರುಪಟ್ಟಿ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅಂತಿಮ ಆಯ್ಕೆ
ಶಿಷ್ಯವೇತನ:
ನೇಮಕಗೊಂಡ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಕಾಯ್ದೆಯ ನಿಯಮಗಳ ಪ್ರಕಾರ ಚಾಲ್ತಿಯಲ್ಲಿರುವ ದರದಲ್ಲಿ ಮಾಹೆಯಾನ ಶಿಷ್ಯವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 100ರೂ. ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂ ಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
• RRCNR ಅಧಿಕೃತ ಜಾಲತಾಣ https://rrcnr.org/ಕ್ಕೆ ಭೇಟಿ ನೀಡಿ.
• ನಂತರ “2025-26ನೇ ಸಾಲಿಗೆ ಉತ್ತರ ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ 4116 ಅಪ್ರೆಂಟಿಸ್ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನ” – ಶೀರ್ಷಿಕೆಯ ಲಿಂಕ್ ವಿಭಾಗದ ಕೆಳಗೆ ನೀಡಲಾಗಿರುವ “ಆನ್ಲೈನ್ ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.
• ನೋಂದಣಿ ಐಡಿ, ಪಾಸ್ವರ್ಡ್ ಹಾಗೂ ಕ್ಯಾಪ್ಚಾ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ, ನೋಂದಾಯಿಸಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಮೂಲ ಮಾಹಿತಿಗಳು, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ITI DEPLOMA