ವಾಯುವ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ ಜೈಪುರ ಅಧಿಸೂಚನೆ ಹೊರಡಿಸಿದೆ, ಅರ್ಜಿ ಸಲ್ಲಿಕೆ ಅ.3 ಪ್ರಾರಂಭವಾಗಲಿದೆ.
ವಿವಿಧ ಕಾರ್ಯಾಗಾರಗಳ ಗೊತ್ತುಪಡಿಸಿದ ಟ್ರೇಡ್ಗಳಲ್ಲಿ ಪ್ರಸ್ತುತ ಖಾಲಿ ಇರುವ (ಫಿಟ್ಟರ್, ಮೆಕಾನಿಕ್, ಕಾರ್ಪೆಂಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಸ್ಟೆನೋಗ್ರಾಫರ್ ಹಾಗೂ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ) ಸೇರಿದಂತೆ ಇತರೆ ಒಟ್ಟು 2094 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸದರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಾಯುವ್ಯ ರೈಲ್ವೆಯ ಅಧಿಕೃತ ಜಾಲತಾಣ https://rrcjaipur.in/ ಕ್ಕೆ ಭೇಟಿ ನೀಡಿ. ನ.02 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಅಕ್ಟೋಬರ್ 03, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 02, 2025
ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ನವೆಂಬರ್ 02, 2025
ಶೈಕ್ಷಣಿಕ ಅರ್ಹತೆ:
ವಾಯುವ್ಯ ರೈಲ್ವೆ ಅಧಿಕೃತ ಅಧಿಸೂಚನೆಯ ಪ್ರಕಾರ ಸದರಿ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಎಸ್ಸೆಸ್ಸೆಲ್ಸಿ ಜೊತೆಗೆ ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.
ವಯೋಮಿತಿ:
02-11-2025 ರಂತೆ;
ಕನಿಷ್ಠ ಮಿತಿ – 15 ವರ್ಷಗಳು
ಗರಿಷ್ಠ ಮಿತಿ – 24 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು, ಓಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 3 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ:
ಶಾರ್ಟ್ಲಿಸ್ಟಿಂಗ್
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅಂತಿಮ ಆಯ್ಕೆ
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಸಮಯದಲ್ಲಿ ರೈಲ್ವೆ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಚಾಲ್ತಿಯಲ್ಲಿರುವ ನಿಯಮಗಳು ಮತ್ತು ನಿರ್ದೇಶನಗಳ ಪ್ರಕಾರ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಇತರ ಎಲ್ಲಾ ಅಭ್ಯರ್ಥಿಗಳಿಗೆ – 100ರೂ.
ಅರ್ಜಿ ಸಲ್ಲಿಸುವುದು ಹೇಗೆ?
• ನಂತರ ವಾಯುವ್ಯ ರೈಲ್ವೆಯ ಅಧಿಕೃತ ಜಾಲತಾಣ https://rrcjaipur.in/ ಕ್ಕೆ ಭೇಟಿ ನೀಡಿ.
Rrc Nwr Apprentice Online Form 2025-26
• ಬಳಿಕ ತ್ವರಿತ ಲಿಂಕ್ ಗಳು ವಿಭಾಗದ ಕೆಳಗೆ ನೀಡಲಾಗಿರುವ ”ಅಪ್ರೆಂಟಿಸ್ 04/2025″ ಆಯ್ಕೆಯ ಮೇಲೆ ಟ್ಯಾಪ್ ಮಾಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣವನ್ನು ತೆಗೆದುಕೊಳ್ಳಿ.
Hi give me job sir
Gokak
Shri kanakadas ITI Gokak