2025-26ನೇ ಸಾಲಿಗೆ ಕ್ರೀಡಾ ಕೋಟಾದಡಿಯಲ್ಲಿ 54 ಹುದ್ದೆಗಳ ನೇಮಕಾತಿಗಾಗಿ ವಾಯುವ್ಯ ರೈಲ್ವೆಯು ಅಧಿಸೂಚನೆ ಬಿಡುಗಡೆ ಮಾಡಿದೆ.
ರೈಲ್ವೆ ನೇಮಕಾತಿ ಕೋಶ (RRC) ಜೈಪುರ, (ರಾಜಸ್ಥಾನ) ವಾಯುವ್ಯ ರೈಲ್ವೆ ನೇಮಕಾತಿ 2025 – ಕ್ರೀಡಾ ಕೋಟಾದಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕ್ರೀಡಾ ವ್ಯಕ್ತಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRC ಅಧಿಕೃತ ವೆಬ್ ಸೈಟ್ https://rrcjaipur.in/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – 10-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10-08-2025
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
10th, 12th, ITI, Degree in Related Discipline.
ವಯೋಮಿತಿ:
ದಿ:01-07 2025 ರಂತೆ;
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 25 ವರ್ಷಗಳು
ಸರ್ಕಾರಿ ನಿಯಮಗಳ ಅನುಸಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಆಯ್ಕೆ ಪ್ರಕ್ರಿಯೆ:
ದಾಖಲೆ ಪರಿಶೀಲನೆ
ಫಿಟ್ ನೆಸ್ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ – 500ರೂ. (400ರೂ. ಮರುಪಾವತಿ ಮಾಡುವ ಅವಕಾಶವಿದೆ)
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆರ್ಥಿಕವಾಗಿ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 250 ರೂ. (250 ರೂ. ಮರುಪಾವತಿ ಮಾಡುವ ಅವಕಾಶವಿದೆ)
How to Apply RRC NWR Spots Quota Vacancy 2025
ಅರ್ಜಿ ಸಲ್ಲಿಸುವ ವಿಧಾನ;
RRC ಅಧಿಕೃತ ವೆಬ್ ಸೈಟ್ https://rrcjaipur.in/ ಗೆ ಭೇಟಿ ನೀಡಿ.
ದಿನಾಂಕ 10-07-2025 ನಂತರ ಸಕ್ರಿಯವಾಗುವ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.