ದಕ್ಷಿಣ ಪೂರ್ವ ರೈಲ್ವೆ(SER)ಯಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ ಒಟ್ಟು 1785 ಅಭ್ಯರ್ಥಿಗಳಿಗೆ ಗೊತ್ತುಪಡಿಸಿದ ಟ್ರೇಡ್ಗಳಿಗೆ ಭರ್ತಿ ಮಾಡಿಕೊಂಡು ತರಬೇತಿ ನೀಡಲು ರೈಲ್ವೆ ನೇಮಕಾತಿ ಕೋಶ (RRC) ಅರ್ಜಿ ಆಹ್ವಾನಿಸಿದೆ.
ವಿವಿಧ ಕಾರ್ಯಾಗಾರಗಳು/ಘಟಕಗಳಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಮೆಕ್ಯಾನಿಕ್, ಪೇಂಟರ್ ಹಾಗೂ ರೆಫ್ರಿಜರೇಟರ್ ಮತ್ತು ಎಸಿ ಮೆಕ್ಯಾನಿಕ್ ಟ್ರೇಡ್ಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ತರಬೇತಿ ನೀಡಲಿದೆ. ಸದರಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿ.17 ಕೊನೆ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRCSER ಅಧಿಕೃತ ಜಾಲತಾಣ https://iroams.com/RRCSER25/applicationIndexಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 17, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣ ಜೊತೆಗೆ NCVT/SCVT ಯಿಂದ ನೀಡಲಾದ ಆಯಾ ಟ್ರೇಡ್ನಲ್ಲಿ ಐಟಿಐ(ITI) ಉತ್ತೀರ್ಣರಾದ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ:
01-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 15 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 24 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ, ಪಿಡಬ್ಲ್ಯೂಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ಪ್ರಕ್ರಿಯೆ:
ಶಾರ್ಟ್ಲಿಸ್ಟಿಂಗ್ ದಾಖಲೆ ಪರಿಶೀಲನೆ ವೈದ್ಯಕೀಯ ಪರೀಕ್ಷೆ ಅಂತಿಮ ಆಯ್ಕೆ
ಸ್ಟೈಫಂಡ್
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಕಾಯ್ದೆಯ ನಿಯಮಗಳ ಪ್ರಕಾರ 7,700-8050ರೂ. ವರೆಗೆ ಪ್ರತಿ ತಿಂಗಳು ತರಬೇತಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 100ರೂ. ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂ ಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
• RRCSER ಅಧಿಕೃತ ಜಾಲತಾಣ https://iroams.com/RRCSER25/applicationIndex ಕ್ಕೆ ಭೇಟಿ ನೀಡಿ.
• ನಂತರ “ಸೂಚನೆ ಸಂಖ್ಯೆ SER/P-HQ/RRC/PERS/ACT ಅಪ್ರೆಂಟಿಸಸ್/2025-26” ವಿಭಾಗದ ಕೆಳಗೆ ನೀಡಲಾಗಿರುವ “ಅನ್ವಯಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನೋಂದಣಿ ಐಡಿ, ಪಾಸ್ವರ್ಡ್ ಹಾಗೂ ಕ್ಯಾಪ್ಚಾ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಮೂಲ ಮಾಹಿತಿಗಳು, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.