ದಕ್ಷಿಣ ರೈಲ್ವೆ(SR)ಯು 2025-26ನೇ ಸಾಲಿಗನಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶವು ಸೋಮವಾರ(ಆ.25) ಅಧಿಸೂಚನೆ ಹೊರಡಿಸಿದೆ.
ವಿಭಾಗಗಳು/ಕಾರ್ಯಾಗಾರಗಳು/ಘಟಕಗಳಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳಲ್ಲಿ ಪ್ರಸ್ತುತ ಖಾಲಿ ಇರುವ ಫಿಟ್ಟರ್, ಪೇಂಟರ್, ವೆಲ್ಡರ್, ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞ, ಮೆಷಿನಿಸ್ಟ್, MMV, ಟರ್ನರ್, ಡೀಸೆಲ್ ಮೆಕ್ಯಾನಿಕ್, ಕಾರ್ಪೆಂಟರ್, ಪೇಂಟರ್ ಸೇರಿದಂತೆ ಇತರೆ ಒಟ್ಟು 3518 ಅಪ್ರೆಂಟಿಸ್ ಹುದ್ದೆಗಳ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು sr.indianrailways.gov.inಗೆ ಭೇಟಿ ನೀಡಿ. ಸೆ.25ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಆಗಸ್ಟ್ 25, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 25, 2025
ಶೈಕ್ಷಣಿಕ ಅರ್ಹತೆ:
12ನೇ ಶಿಕ್ಷಣ ಪದ್ಧತಿಯಲ್ಲಿ ಅಥವಾ ತತ್ಸಮಾನದಲ್ಲಿ 10ನೇ ತರಗತಿಯಲ್ಲಿ (ಕನಿಷ್ಠ 50% ಒಟ್ಟು ಅಂಕಗಳೊಂದಿಗೆ) ಉತ್ತೀರ್ಣರಾಗಿರಬೇಕು ಮತ್ತು ಸರ್ಕಾರಿ ಮಾನ್ಯತೆ ಪಡೆದ ಐಟಿಐನಲ್ಲಿ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು ಮತ್ತು ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿ ಅಥವಾ ರಾಜ್ಯ ವೃತ್ತಿಪರ ತರಬೇತಿ ಮಂಡಳಿಯಿಂದ ಆಯಾ ಟ್ರೇಡ್‌ನಲ್ಲಿ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ:
25/09/2025 ರಂತೆ;
- ಕನಿಷ್ಠ ವಯಸ್ಸಿನ ಮಿತಿ – 15 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 22/24 ವರ್ಷಗಳು
ವಯೋಮಿತಿ ಸಡಿಲಿಕೆ:
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
ಒಬಿಸಿ-(NCL) ಅಭ್ಯರ್ಥಿಗಳಿಗೆ – 3 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಶಿಷ್ಯವೇತನ/ತರಬೇತಿ ಭತ್ಯೆ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಕಾಯ್ದೆಯ ನಿಯಮಗಳ ಪ್ರಕಾರ 6000-7000 ರೂ.ವರೆಗೆ ತರಬೇತಿ ಭತ್ಯೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 100ರೂ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂ ಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for RRC SR Apprentice Recruitment 2025
ಅರ್ಜಿ ಸಲ್ಲಿಸಲು ಈ ಕೆಳಗಿನ ವಿಧಾನ ಅನುಸರಿಸಿ;
- ದಕ್ಷಿಣ ರೈಲ್ವೆ ಅಧಿಕೃತ ವೆಬ್ಸೈಟ್ https://sronline.etrpindia.com/rrc_sr_apprenticev1/recruitmentIndex ಗೆ ಭೇಟಿ ನೀಡಿ.
- ನೋಂದಣಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
- ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | sr.indianrailways.gov.in |
| More Updates | KarnatakaHelp.in |
I want job I am complete dredge (BBA)
Please confirm my application
Recveshte to job t t
RRB
I want this job iam completed 2nd puc Art’s
2puc