ಪಶ್ಚಿಮ ಮಧ್ಯ ರೈಲ್ವೆಯಲ್ಲಿ (WCR) 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್ಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶವು ಬುಧವಾರ (ಆ.20) ಅಧಿಸೂಚನೆಯನ್ನು ಹೊರಡಿಸಿದೆ.
ಪಶ್ಚಿಮ ಮಧ್ಯ ರೈಲ್ವೆಯ ವ್ಯಾಪ್ತಿಯಲ್ಲಿರುವ ಘಟಕಗಳು/ಕಾರ್ಯಗಾರಗಳ ವಿವಿಧ ವಿಭಾಗಗಳಲ್ಲಿ ಒಟ್ಟು 2,865 ಅಪ್ರೆಂಟಿಸ್ ಹುದ್ದೆಗಳ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 29ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ.
RRC WR ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಒಟ್ಟಾರೆಯಾಗಿ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ (10+2 ವರ್ಷದೊಳಗಿನ ಪರೀಕ್ಷಾ ವ್ಯವಸ್ಥೆ) ಉತ್ತೀರ್ಣರಾಗಿರಬೇಕು. ಜೊತೆಗೆ ಸಂಬಂಧಿಸಿದ ಟ್ರೇಡ್ನಲ್ಲಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ:
20/08/2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 15 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 24 ವರ್ಷಗಳು
ವಯೋಮಿತಿ ಸಡಿಲಿಕೆ;
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ (ಪ.ಜಾತಿ, ಪ.ಪಂಗಡಗಳಿಗೆ – 15 ವರ್ಷಗಳು ಮತ್ತು ಒಬಿಸಿಗಳಿಗೆ 13 ವರ್ಷಗಳು) ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಕಾಯ್ದೆಯ ನಿಯಮಗಳ ಪ್ರಕಾರ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 141ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂ ಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 41ರೂ.
ಅರ್ಜಿ ಸಲ್ಲಿಕೆ ಹೇಗೆ?
ಪಶ್ಚಿಮ ಮಧ್ಯ ರೈಲ್ವೆ ಅಧಿಕೃತ ವೆಬ್ಸೈಟ್ https://wcr.indianrailways.gov.in/view_section.jsp?lang=0&id=0,7,288,1391,2245ಗೆ ಭೇಟಿ ನೀಡಿ.
2025-26ನೇ ಸಾಲಿಗೆ ಆಕ್ಟ್ ಅಪ್ರೆಂಟಿಸ್ ಗಳ ನೇಮಕಾತಿ ವಿಭಾಗದ ಕೆಳಗೆ ಆ.30ರಂದು ಸಕ್ರಿಯವಾಗುವ – “ಅಧಿಸೂಚನೆ ಸಂಖ್ಯೆ. 01/2025 (ಆಕ್ಟ್ ಅಪ್ರೆಂಟಿಸ್) ವಿರುದ್ಧ ಆನ್ಲೈನ್ ಅರ್ಜಿಗಾಗಿ” ಇಲ್ಲಿ ಕ್ಲಿಕ್ ಮಾಡಿ ಲಿಂಕ್ ಮೇಲೆ ಟ್ಯಾಪ್ ಮಾಡಿ.
ನೋಂದಣಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.