ರೈಲ್ವೆ ನೇಮಕಾತಿ ಸೆಲ್ (RRC), ಪಶ್ಚಿಮ ರೈಲ್ವೆ (WR)ಯಲ್ಲಿ 2024-25ನೇ ಸಾಲಿನ ವಿವಿಧ ವಿಭಾಗದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪಶ್ಚಿಮ ರೈಲ್ವೆ ಈ ನೇಮಕಾತಿಯಲ್ಲಿ ಒಟ್ಟು 5066 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಬಯಸುವ ಅಧಿಕೃತ ಜಾಲತಾಣ (www.rrc-wr.com/)ಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. RRC WR Recruitment 2024 ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಪೂರ್ತಿಯಾಗಿ ಓದಿ ನಂತರವೇ ಅರ್ಜಿ ಸಲ್ಲಿಸಲು ಮುಂದಾಗಿ.
Organization Name – Railway Recruitment Cell (RRC), Western Railway (WR) Post Name – Apprentices Total Vacancy – 5066 Application Process – Online Job Location – All Over India
Important Dates:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 23, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 22, 2024
ಶೈಕ್ಷಣಿಕ ಅರ್ಹತೆ:
ಪಶ್ಚಿಮ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) / ITI ವಿದ್ಯಾರ್ಹತೆ ಪಡೆದಿರಬೇಕು.
ವಯಸ್ಸಿನ ಮಿತಿ:
ಪಶ್ಚಿಮ ರೈಲ್ವೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 15 ರಿಂದ 24 ವರ್ಷಗಳು ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ.
ಆಯ್ಕೆ ಪ್ರಕ್ರಿಯೆ:
ಪಶ್ಚಿಮ ರೈಲ್ವೆ (WR) ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಶಾರ್ಟ್ಲಿಸ್ಟ್ (10 ನೇ ತರಗತಿ ಮತ್ತು ITI ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ)
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ಪಶ್ಚಿಮ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳ ಆಧಾರಿತವಾಗಿ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/ PWBD/ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಕಟ್ಟುವಂತಿಲ್ಲ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 100/-
How to Apply RRC WR Apprentice Recruitment 2024
ಮೊದಲಿಗೆ ಅಧಿಕೃತ ವೆಬ್ಸೈಟ್ https://www.rrc-wr.com/ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ
Online Application For Engagement of Act Apprenticeship Training in Western Railway (WR) (Click Here For Online Form)ಲಿಂಕ್ ಮಾಡಿ.
ನಂತರ ಹೊಸ ವೆಬ್ ಪೇಜ್ ತೆರೆದುಕೊಳ್ಳುತ್ತೇದೆ, ಅಲ್ಲಿ ಲಾಗಿನ್ ವಿವರಗಳನ್ನು ಭರ್ತಿ ಮಾಡಿ ಹೊಸ ಖಾತೆಯನ್ನು ರಚಿಸಿ
ನಂತರ ನೊಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಮಾಡಿ.
ಅಲ್ಲಿ ಕೇಳಲಾಗುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕವನ್ನು ಪಾವತಿಸಿ
ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿ.