ರೈಲ್ವೆ ಇಲಾಖೆ ನೇಮಕಾತಿಯು (RRC), ಪಶ್ಚಿಮ ರೈಲ್ವೇ (WR) ವಿಭಾಗದಲ್ಲಿ ಸ್ಪೋರ್ಟ್ಸ್ ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ರೈಲ್ವೆ ನೇಮಕಾತಿ ಸೆಲ್ (RRC), ಪಶ್ಚಿಮ ರೈಲ್ವೇ, ಮುಂಬೈ, 2024-25 ನೇ ಸಾಲಿಗೆ ಸ್ಪೋರ್ಟ್ಸ್ ಕೋಟಾದಲ್ಲಿ ಖಾಲಿ ಇರುವ 64 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಕೀಡಾ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕ್ರೀಡಾ ಪ್ರಯೋಗ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Rrc Wr Sports Quota Recruitment 2024
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRC ಅಧಿಕೃತ ವೆಬ್ ಸೈಟ್ ಮೂಲಕ ಸೆಪ್ಟೆಂಬರ್ 16ರ ಒಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ RRC WR Sports Quota Recruitment 2024 ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.