RTE Karnataka Admission 2025: ಉಚಿತ ಹಾಗೂ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ ಅನ್ವಯ ಮಕ್ಕಳಿಗೆ ಉಚಿತ ಶಿಕ್ಷಣ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣದ ಹಕ್ಕು ಕಾಯ್ದೆ[Right to Education Act (RTE)] 2025-26 ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದು ಶೇ 25 ರಷ್ಟು ಬಡ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡುವ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 2025-26 ನೇ ಸಾಲಿಗೆ LKG ಮತ್ತು 1ನೇ ತರಗತಿಗೆ ಪ್ರವೇಶ ಪಡೆಯಲು ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಉಚಿತ ಹಾಗೂ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ ಮತ್ತು ನಿಯಮಾವಳಿಗಳ ಪ್ರಕಾರ 6 ರಿಂದ 14 ವಯೋಮಿತಿಯ ಎಲ್ಲ ಮಕ್ಕಳು ತಮ್ಮ ನೆರೆಹೊರೆಯ ಶಾಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯಬಹುದಾಗಿದೆ
ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.
ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪು ಮಾಹಿತಿ ನೀಡಬಾರದು.
ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸ್ವೀಕೃತಿ ಪತ್ರವನ್ನು ಡೌನ್‌ಲೋಡ್ ಮಾಡಿ ಮತ್ತು ಸುರಕ್ಷಿತವಾಗಿ ಇಟ್ಟುಕೊಳ್ಳತಾಕ್ಕದ್ದು.
Last Date of RTE Karnataka Admission 2025-26 Online Registration
ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 12-05-2025
How to Apply for RTE Admission 2025-26
ಅರ್ಜಿ ಸಲ್ಲಿಸುವ ವಿಧಾನ:
ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://schooleducation.kar.nic.in/ ಗೆ ಭೇಟಿ ನೀಡಿ
ಹೋಮ್ ಪೇಜ್‌ನಲ್ಲಿ ‘ಆರ್‌ಟಿಇ 2025-26 ಆನ್‌ಲೈನ್ ಅಪ್ಲಿಕೇಶನ್’ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಮಾಹಿತಿಯನ್ನು ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹೆಚ್ಚಿನ ಮಾಹಿತಿಗಾಗಿ:
ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ: 1800-425-5111 ಸಂಪರ್ಕಿಸಬಹುದು.
RTE ಯೋಜನೆಯು ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಅವಕಾಶವನ್ನು ನೀಡುತ್ತದೆ. ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಲು ಎಲ್ಲಾ ಅರ್ಹ ತಮ್ಮ ಮಕ್ಕಳಿಗೆ ಖಾಸಗಿ ಶಾಲೆಗಳಿಗೆ ಪ್ರವೇಶಕ್ಕಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.