RTE Karnataka Admission 2025: ಉಚಿತ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ!, ಸಲ್ಲಿಕೆ ಹೇಗೆ?

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

RTE Admission 2025-26 Karnataka
RTE Admission 2025-26 Karnataka

RTE Karnataka Admission 2025: ಉಚಿತ ಹಾಗೂ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ ಅನ್ವಯ ಮಕ್ಕಳಿಗೆ ಉಚಿತ ಶಿಕ್ಷಣ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿಕ್ಷಣದ ಹಕ್ಕು ಕಾಯ್ದೆ[Right to Education Act (RTE)] 2025-26 ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದು ಶೇ 25 ರಷ್ಟು ಬಡ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡುವ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 2025-26 ನೇ ಸಾಲಿಗೆ LKG ಮತ್ತು 1ನೇ ತರಗತಿಗೆ ಪ್ರವೇಶ ಪಡೆಯಲು ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಾಖಲೆಗಳು:

  1. ಮಗುವಿನ ಜನನ ಪ್ರಮಾಣ ಪತ್ರ
  2. ಪೋಷಕರ ಆಧಾರ್ ಕಾರ್ಡ್
  3. ವಾಸಸ್ಥಳ ದೃಢೀಕರಣ ಪತ್ರ
  4. ಆದಾಯ ಪ್ರಮಾಣ ಪತ್ರ (BPL ಕಾರ್ಡ್ / ರೇಷನ್ ಕಾರ್ಡ್)
  5. ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಅನ್ವಯವಾಗುವಂತೆ)

ಮುಖ್ಯವಾಗಿ ಗಮನಿಸಬೇಕಾದ ಅಂಶಗಳು:

  • ಉಚಿತ ಹಾಗೂ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ ಮತ್ತು ನಿಯಮಾವಳಿಗಳ ಪ್ರಕಾರ 6 ರಿಂದ 14 ವಯೋಮಿತಿಯ ಎಲ್ಲ ಮಕ್ಕಳು ತಮ್ಮ ನೆರೆಹೊರೆಯ ಶಾಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯಬಹುದಾಗಿದೆ
  • ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.
  • ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪು ಮಾಹಿತಿ ನೀಡಬಾರದು.
  • ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸ್ವೀಕೃತಿ ಪತ್ರವನ್ನು ಡೌನ್‌ಲೋಡ್ ಮಾಡಿ ಮತ್ತು ಸುರಕ್ಷಿತವಾಗಿ ಇಟ್ಟುಕೊಳ್ಳತಾಕ್ಕದ್ದು.

Last Date of RTE Karnataka Admission 2025-26 Online Registration

ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 12-05-2025

How to Apply for RTE Admission 2025-26

ಅರ್ಜಿ ಸಲ್ಲಿಸುವ ವಿಧಾನ:

  1. ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://schooleducation.kar.nic.in/ ಗೆ ಭೇಟಿ ನೀಡಿ
  2. ಹೋಮ್ ಪೇಜ್‌ನಲ್ಲಿ ‘ಆರ್‌ಟಿಇ 2025-26 ಆನ್‌ಲೈನ್ ಅಪ್ಲಿಕೇಶನ್’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಮಾಹಿತಿಯನ್ನು ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ:

ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ
ಸಹಾಯವಾಣಿ ಸಂಖ್ಯೆ: 1800-425-5111 ಸಂಪರ್ಕಿಸಬಹುದು.

RTE ಯೋಜನೆಯು ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಅವಕಾಶವನ್ನು ನೀಡುತ್ತದೆ. ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಲು ಎಲ್ಲಾ ಅರ್ಹ ತಮ್ಮ ಮಕ್ಕಳಿಗೆ ಖಾಸಗಿ ಶಾಲೆಗಳಿಗೆ ಪ್ರವೇಶಕ್ಕಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.

Important Direct Links:

RTE 2025 Karnataka Admission Online form LinkApply Now
Official WebsiteSchool Education
More UpdatesKarnatakaHelp.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment