RVNL ನೇಮಕಾತಿ: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ₹ 2.2 ಲಕ್ಷಗಳವರೆಗೆ ವೇತನ..!

BE ಅಥವಾ B.Tech ಪೂರ್ಣಗೊಳಿಸಿದವರಿಗೆ ಉದ್ಯೋಗಾವಕಾಶ | ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 16, 2025

Published on:

ಫಾಲೋ ಮಾಡಿ
RVNL Manager Post Notification
RVNL Manager Post Notification

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (Rail Vikas Nigam Limited) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್, ಸೀನಿಯರ್ ಡಿ.ಜಿ.ಎಂ. ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

RVNL ಹೊಸ ರೈಲು ಮಾರ್ಗಗಳು, ರೈಲು ದ್ವಿಗುಣಗೊಳಿಸುವಿಕೆ, ಗೇಜ್ ಪರಿವರ್ತನೆ, ವಿದ್ಯುದ್ದೀಕರಣ, ಮೆಟ್ರೋ ರೈಲ್ವೆಗಳು ಮತ್ತು ಇತರ ಸಾರಿಗೆ ಮೂಲಸೌಕರ್ಯ ಯೋಜನೆಗಳ ಅನುಷ್ಠಾನವನ್ನು ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ಯಮದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16, 2025 ಕ್ಕೂ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

About the Author

ರಾಮಕೃಷ್ಣ ಬಿ ಹೆಚ್‌ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

Leave a Comment