ರೈಲ್ವೆ ಸಚಿವಾಲಯದ ಬೆಂಗಳೂರಿನ ರೈಲ್ ವೀಲ್ ಫ್ಯಾಕ್ಟರಿಗೆ ಟ್ಯಾಲೆಂಟ್ ಸ್ಕೌಟಿಂಗ್ ಯೋಜನೆ ಮತ್ತು ಕ್ರೀಡಾಕೋಟಾದಡಿಯಲ್ಲಿ ಕ್ರೀಡಾಪಟುಗಳ ನೇಮಕಾತಿಗಾಗಿ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 20 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು. ಕ್ರಿಕೆಟ್(ಬ್ಯಾಟ್ಸ್ಮನ್/ಬೌಲರ್/ಆಲ್-ರೌಂಡರ್/ವಿಕೆಟ್ ಕೀಪರ್), ಹಾಕಿ, ಕಬಡ್ಡಿ, ಫುಟ್ಬಾಲ್, ಚೆಸ್ ನಲ್ಲಿ ಕ್ರೀಡಾ ಸಾಧನೆ ಗೈದ ಪುರುಷ ಕ್ರೀಡಾಪಟು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.01ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ..
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ 10ನೇ ತರಗತಿ/12ನೇ ತರಗತಿ/ ಐ.ಟಿ.ಐ ಉತ್ತೀರ್ಣ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
*ಜೊತೆಗೆ ನಿಗದಿತ ಕ್ರೀಡೆಯಲ್ಲಿ ಸಾಧನೆ ಮಾಡಿರಬೇಕು. ಈ ಕುರಿತು ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿ.
ವಯೋಮಿತಿ:
ಜನವರಿ 01, 2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಕಡಿಮೆ ಅಥವಾ ಹೆಚ್ಚಿನ ವಯಸ್ಸಿನ ಸಡಿಲಿಕೆ ಅನ್ವಯಿಸುವುದಿಲ್ಲ.
ಆಯ್ಕೆ ವಿಧಾನ:
ಕ್ರೀಡಾ ಪ್ರಯೋಗ/ಫಿಟ್ನೆಸ್ ಪರೀಕ್ಷೆ ದಾಖಲೆ ಪರಿಶೀಲನೆ ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
• ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರಗಳನ್ನು ನಮೂದಿಸಿ. ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ನಿಗದಿತ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
ವಿಳಾಸ: ಸಹಾಯಕ ಸಿಬ್ಬಂದಿ ಅಧಿಕಾರಿ-IV ರೈಲ್ ವೀಲ್ ಫ್ಯಾಕ್ಟರಿ, ಯಲಹಂಕ, ಬೆಂಗಳೂರು-560064
ಹೆಚ್ಚಿನ ಮಾಹಿತಿಗಾಗಿ: ಇ-ಮೇಲ್ rwf.nte@gmail.com ಅಥವಾ ದೂರವಾಣಿ ಸಂಖ್ಯೆ-080-28072622 ಅನ್ನು ಸಂಪರ್ಕಿಸಬಹುದು.
Important Direct Links:
Official Notification and Application Form PDF (Talent Scouting Scheme)