ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL), ಭಾರತದ ಅತಿದೊಡ್ಡ ಉಕ್ಕು ಉತ್ಪಾದಕ ಕಂಪನಿ, 2024 ರಲ್ಲಿ ಮ್ಯಾನೇಜ್‌ಮೆಂಟ್ ಟ್ರೇನಿ (MT) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ, SAIL ಒಟ್ಟು 249 MT ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ಈ ನೇಮಕಾತಿಯಲ್ಲಿ ವಿವಿಧ ಎಂಜಿನಿಯರಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 249 ಟ್ರೇನಿ ಹುದ್ದೆಗಳಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ .SAIL ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 25ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of SAIL Management Trainee Recruitment 2024
Organization Name : Steel Authority Of India Limited Post Name: Management Trainee Number of Posts : 249 Application Process: Online Place of Employment : All over India
Important Dates:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ - 5 ಜುಲೈ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25 ಜುಲೈ 2024
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್ ಪದವಿ ಪಡೆರಬೇಕು.
GATE 2024 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ವಯೋಮಿತಿ:
ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳ ವಯಸ್ಸು 27 ವರ್ಷಗಳಿಗಿಂತ ಮೀರಬಾರದು.
ಆಯ್ಕೆ ಪ್ರಕ್ರಿಯೆ:
SAIL ಮ್ಯಾನೇಜ್‌ಮೆಂಟ್ ಟ್ರೈನಿಗಳ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಯನ್ನು ಒಳಗೊಂಡಿರುತ್ತದೆ ನಂತರ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನವನ್ನು ಒಳಗೊಂಡಿರುತ್ತದೆ.