ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ SATHEE (ಸ್ವಯಂ ಮೌಲ್ಯಮಾಪನ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಗಳಿಗೆ ಸಹಾಯ) ಎನ್ನವ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಇದು ಒಂದು ಉಚಿತ ಆನ್ ಲೈನ್ ಕೋಚಿಂಗ್ ಪ್ಲಾಟ್ ಫಾರ್ಮ್ ಆಗಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಸ್ವಯಂ ಮೌಲ್ಯಮಾಪನ, ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಗಳಿಗೆ ಸಹಾಯ ಮಾಡಲಾಗುತ್ತದೆ.
SATHEE ಎಂದರೆ (Self Assessment, Test, and Help for Entrance Exams) ಇದು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳಲ್ಲಿ ನೀಡುವ ತರಬೇತಿಯ ಅನುಭವವನ್ನು (ಆನ್ಲೈನ್ ಮೂಲಕ) ಈ ಕಾರ್ಯಕ್ರಮದ ಮೂಲಕ ಪಡೆದುಕೊಳ್ಳಬಹುದು. SATHEE ಪ್ಲಾಟ್‌ಫಾರ್ಮ್‌ನಲ್ಲಿನ ಇಂಗ್ಲಿಷ್ ಮತ್ತು ಹಿಂದಿ ಸೇರಿದಂತೆ ಇತರೆ ಭಾರತೀಯ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು NEET ಮತ್ತು JEE ನಂತಹ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಅಧ್ಯಯನ ಸಾಮಗ್ರಿಯನ್ನು ಒದಗಿಸಿಕೊಂಡುತ್ತೆದೆ.