ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ವಿವಿಧ ರಾಜ್ಯಗಳಲ್ಲಿರುವ ಬ್ಯಾಂಕಿನ ಶಾಖೆಗಳಿಗೆ ಸರ್ಕಲ್ ಬೇಸ್ಡ್ ಆಫೀಸರ್(CBO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಜ.29ರಿಂದ ಆರಂಭವಾಗಿದೆ.
ಒಟ್ಟು 2,273 ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಪದವೀಧರರು ಅರ್ಜಿ ಸಲ್ಲಿಕೆಗೆ ಅರ್ಹರು. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗಾವಕಾಶವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆ.18ರೊಳಗೆ ಅಧಿಕೃತ ಜಾಲತಾಣದ ಲಿಂಕ್ https://ibpsreg.ibps.in/sbicbonov25/ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 18, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (ಐಡಿಡಿ) ಸೇರಿದಂತೆ ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ ಯಾವುದೇ ಸಮಾನ ಅರ್ಹತೆ ವೈದ್ಯಕೀಯ/ಎಂಜಿನಿಯರಿಂಗ್/ಚಾರ್ಟರ್ಡ್ ಅಕೌಂಟೆಂಟ್/ಕಾಸ್ಟ್ ಅಕೌಂಟೆಂಟ್ನಂತಹ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ:
31/12/2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ, ಪ. ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ -05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10-15 ವರ್ಷಗಳು.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನ 48,480ರೂ., ಸರ್ಕಾರಿ ಸೌಲಭ್ಯಗಳು ಹಾಗೂ ಇತರ ಭತ್ಯೆಗಳನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ
ಸ್ಕ್ರೀನಿಂಗ್
ಸಂದರ್ಶನ
ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 750ರೂ. ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ:
• ಅಧಿಕೃತ ಜಾಲತಾಣ https://ibpsreg.ibps.in/sbicbonov25/ ಕ್ಕೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
Sbi Cbo Recruitment 2025-26 Online Application Form
• ನಂತರ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.